Mysore
21
scattered clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ದಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ನಾಗಮಂಗಲದಲ್ಲಿ ಇಂದು …

ಬೆಂಗಳೂರು: ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿ ಬಳ್ಳಾರಿ ಪದಯಾತ್ರೆ ನಡೆಸಲು ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ನಾವು ಕೂಡ ವಾಲ್ಮೀಕಿ ಹಗರಣದ ವಿಚಾರದಲ್ಲಿ …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 …

ಮೈಸೂರು: ದಸರಾ ಮಹೋತ್ಸವದ ಆಚರಣೆಗೆಂದು ಸರ್ಕಾರವೇ 40 ಕೋಟಿ ರೂ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವೆ ಮತ್ತೆ ಪ್ರಾಯೋಜಕರನ್ನು ಹುಡುಕುತ್ತಿರುವುದಾದರು ಏಕೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಪ್ರಶ್ನೆ ಮಾಡಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆ ಆರಂಭಗೊಂಡಿದ್ದು, ದಸರಾ …

ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಗಲಾಟೆ ಸಂಬಂಧ ಎಸ್‌ಪಿ ಜೊತೆ ಮಾತನಾಡಿದ್ದೇನೆ. ನಿನ್ನೆ ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು …

ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ನಡೆದರೆ, ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿರುವ ಬೆನ್ನಲ್ಲೇ ಹಲವು ಕಾಂಗ್ರೆಸ್‌ ಶಾಸಕರು ಸಿಎಂ ಕುರ್ಚಿಯ …

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ಕಡಿತ ಮಾಡಲ್ಲ. ತೆರಿಗೆ ಪಾವತಿ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಕಾರು ಅಪಘಾತದ ಬಗ್ಗೆ ನಟ ಕಿರಣ್‌ ರಾಜ್‌ ರಿಯಾಕ್ಟ್‌ ಮಾಡಿದ್ದು, ನಾನು ಈಗ ಆರೋಗ್ಯವಾಗಿದ್ದೇನೆ. ಯಾರೂ ಕೂಡ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದಾರೆ. …

ಹಾಸನ: ಶಿರಾಡಿ ಘಾಟ್‌ ಬಳಿ ಇದ್ದಕ್ಕಿದ್ದಂತೆ ಟ್ಯಾಂಕರ್‌ ಲಾರಿಯೊಂದು ಹೊತ್ತಿ ಉರಿದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶಿರಾಡಿ ಘಾಟ್‌ ಮಧ್ಯದ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಚಾಲನೆ ಮಾಡುವ ವೇಳೆಯೇ ಟ್ಯಾಂಕರ್‌ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣದಲ್ಲೇ ಎಚ್ಚೆತ್ತ ಚಾಲಕ ಟ್ಯಾಂಕರ್‌ನ್ನು …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ …

error: Content is protected !!