Mysore
23
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

Author: ಮಹಾದೇಶ್ ಎಂ ಗೌಡ

Home/ಮಹಾದೇಶ್ ಎಂ ಗೌಡ
ಮಹಾದೇಶ್ ಎಂ ಗೌಡ

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ ಪಾದಯಾತ್ರೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಪ್ರತಿಭಟನೆ ನಡೆಸಿದರು. ಹನೂರು …

ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು. ಉಪಾಧ್ಯಕ್ಷ …

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ( ಆಗಸ್ಟ್‌ 29 ) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 1.76 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ …

ಹನೂರು: ಕೆಎಸ್‌ಆರ್‌ಟಿಸಿ ಬಸ್‌ ಟೈಯರ್‌ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ ಕೌದಳ್ಳಿ ಮಾರ್ಗವಾಗಿ ದಂಟಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬಸ್‌ನ ಮುಂಭಾಗದ ಟೈರ್‌ ಏಕಾಏಕಿ …

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಯೋಧ ಜ್ಞಾನಪ್ರಕಾಶ್ ರವರು ಕಳೆದ 13 ವರ್ಷಗಳ ಹಿಂದೆ ಭಾರತೀಯ ಸೇನೆಗೆ …

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಭಾನುವಾರ ಸಂಪ್ರದಾಯದಂತೆ ನೆರವೇರಿತು. ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ …

ಹನೂರು: ಭೀಮನ ಅಮವಾಸ್ಯೆ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಆವರಣದಲ್ಲಿ ವಿವಿಧ ಬಗೆಯ ಫಲ ಪುಷ್ಪಗಳು ಹಾಗೂ ತರಕಾರಿಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಶುಕ್ರವಾರ ಎಣ್ಣೆ ಮಜ್ಜನ ಸೇವೆ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಇನ್ನು ಮೂರು ದಿನಗಳಲ್ಲಿ ಸರಗೂರು ಗ್ರಾಮದ ಪಂಪ್ ಹೌಸ್ ನಿಂದ ನೀರು ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಪ್ರವಾಹ …

ಹನೂರು: ಟೆಂಡರ್ ಆಗುವ ಮುನ್ನವೇ ರಸ್ತೆ ಅಭಿವೃದ್ಧಿಗೆ ಶಾಸಕ ಎಂ.ಆರ್.ಮಂಜುನಾಥ್‌ರವರು ಭೂಮಿಪೂಜೆ ನೆರವೇರಿಸಿರುವುದು ಚರ್ಚೆಗೆ ಗ್ರಾಸವಾಗಿರುವುದಲ್ಲದೆ, ರಸ್ತೆ ಅಭಿವೃದ್ಧಿಯಾಗದೆ ನಿತ್ಯ ವಾಹನ ಸವಾರರು ತೊಂದರೆ ಎದುರಿಸುತ್ತಿದ್ದಾರೆ. ಹನೂರು ಮಾರ್ಗವಾಗಿ ಅಜ್ಜೀಪುರ, ರಾಮಾಪುರ, ನಾಲ್‌ರೋಡ್, ಗರಿಕೆಕಂಡಿ ಮೂಲಕ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಈ …

ಹನೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ವಿಷ ಸೇವನೆ ಮಾಡಿರುವ ಘಟನೆ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಚಂದಗಾಲು ಗ್ರಾಮದ ಮಹಾದೇವ ನಾಯಕ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಲೀಲಾವತಿ …

error: Content is protected !!