Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ …

ಮೈಸೂರು :  ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಾತ್ರಿ ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕುಡಿಯುವ ನೀರಿನ ಬಗ್ಗೆ ಜನರು ಹೆಚ್ಚಿನ …

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು …

ಮೈಸೂರು: ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜು ಟ್ರೈನಿಂಗ್ ಅಂಡ್ ಪ್ಲೇಸ್‌ಮೆಂಟ್ ಸೆಲ್ ಹಾಗೂ ವಿವಿಧ ಸಂಸ್ಥೆಗಳಿಂದ ಮೇ೧೭ ರಂದು ಬೆಳಿಗ್ಗೆ ೯.೩೦ಕ್ಕೆ ಪೂಲ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ವಾಣಿಜ್ಯಶಾಶ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ಈಶ್ವರ್ …

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ …

ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ನಾಳೆ ವಾಪಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದರು. ಇದೀಗ ಜಾಮೀನು …

ಮೈಸೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಹಾಸನ ಮಹಿಳೆ ಕಿಡ್ನ್ಯಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಹಚ್‌.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ …

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ ಬೆಂಗಳೂರು : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ …

ಬೆಂಗಳೂರು : ೨೦೨೩-೨೪ರ ಎಸ್‌ಎಸ್‌ಎಲ್‌ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಮೂರನೇ ಸ್ಥಾನ  ಪಡೆದ ವಿದ್ಯಾರ್ಥಿಗಳಿಗೆ ಡಿಸಿಎಂ ಡಿಕೆಶಿ  ನಗದು ಬಹುಮಾನ ನೀಡಿ ಗೌರವಿಸಿದ್ದಾರೆ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಂಕೀತಾ …

ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಭಗೀರಥ ಮಹರ್ಷಿ …