Mysore
26
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು. …

ಮೈಸೂರು : ಶ್ರೀನಿವಾಸ ಪ್ರಸಾದ್‌ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್‌ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ …

ಮೈಸೂರು : ನಾನು ಕಂಡ ಪ್ರಭಾವಿ ನಾಯಕ, ಸ್ವಾಭಿಮಾನಿ ರಾಜಕಾರಣಿ ಶ್ರೀನಿವಾಸ ಪ್ರಸಾದ್‌ ನಮ್ಮ ನಡುವೆ ಬೌದ್ಧಿಕವಾಗಿ ಇಲ್ಲದಿದ್ದರೂ, ಅವರ ಸೈದ್ಧಾಂತಿಕ ನಿಷ್ಠೆ ಹಾಗೂ ಸಾಧನೆಗಳು ಅವರ ಸಾರ್ಥಕ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ …

ಮೈಸೂರು : ಶ್ರೀನಿವಾಸ ಪ್ರಸಾದ್‌ ಅವರ ದೇಹ ನಮ್ಮ ಜೊತೆ ಇಲ್ಲ. ಅವರ ವ್ಯಕ್ತಿವ ಹಾಗೂ ನಡೆದುಕೊಂಡ ರೀತಿ ಮೂಲಕ ಇಂದಿಗೂ ನಮ್ಮ ಜೊತೆ ಇದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯಪಟ್ಟರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್‌ …

ಬೆಂಗಳೂರು : ಪೆಂಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ ಬಹುಮಾನ ಜನತಾ ಪಕ್ಷದ ಘೋಷಿಸಿದೆ. ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಯನ್ನು ಬಂಧಿಸಿವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ.  …

ಬೆಂಗಳೂರು : ದೇವರಾಜೇಗೌಡ ಅರೆಸ್ಟ್‌ ಆಗಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಹಾಗೂ ವಕೀಲರಾದ ದೇವರಾಜೇಗೌಡ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ …

ಮೈಸೂರು : ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ‍್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು. ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಎಸ್. ಎಸ್. ಎಲ್. ಸಿ. …

ಮೈಸೂರು : ವಿಸ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚಿಸಿ ಮಾಲಾರ್ಪಣೆ ಮಾಡಿದರು. ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಹೆಚ್.ಸಿ.ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ …

ಬೆಂಗಳೂರು : ನನ್ನನ್ನೂ ಸೇರಿದಂತೆ ಅನೇಕ ನಾಯಕರು ಮನುಷ್ಯಾರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ದೇವೇಗೌಡರೇ ಕಾರಣ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನೂ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಆದಿಯಾಗಿ …

ಮೈಸೂರು : ಹೈದ್ರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುವಾಗ ಆತ್ಮಹತ್ಯೆ ಮಾಡಿಕೊಂಡ ರೋಹಿತ್ ವೇಮುಲಾ ಅವರ ಸಾವಿನ ಬಗ್ಗೆ ಅಲ್ಲಿನ ಪೊಲೀಸರು ನೀಡಿರುವ ಅಂತಿಮ ತನಿಖೆಯ ವರದಿಯನ್ನು ವಿರೋಧಿಸಿ ಮೈಸೂರು ವಿವಿ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯ …

error: Content is protected !!