Mysore
30
few clouds

Social Media

ಶನಿವಾರ, 14 ಮಾರ್ಚ್ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಮೈಸೂರು : ಕುಟುಂಬದ ಒಬ್ಬ ಸದಸ್ಯನಾದರೂ ಸೇನೆಗೆ ಸೇರಿ ದೇಶಸೇವೆ ಮಾಡಬೇಕು ಎಂದು ನಿವೃತ್ತ ಸೈನಿಕ ಅಂಥೋಣಿ ಜಾರ್ಜ್ ಕರೆ ನೀಡಿದರು. ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ಹಾಗೂ ಎನ್ ಆರ್ ಮೊಹಲ್ಲಾದ ಸೇಂಟ್ ಆನ್ಸ್ ಶಾಲೆಯ …

ಮೈಸೂರು : ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಯನ್ನು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪಿತ …

ಮೈಸೂರು : ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ. ಬಿಳಿಗೆರೆ ಗ್ರಾಮ ಪಂಚಾಯಿತಿಯ ಕಾಮಹಳ್ಳಿ …

ನವದೆಹಲಿ : ನನ್ನನ್ನು ಕೆಣಕಿದರೆ ಹುಷಾರು ಶಿವಕುಮಾರ್‌. ನನ್ನ ಬಳಿ ಇರುವ ನಿಮ್ಮ ಮೆಟೀರಿಯಲ್‌ಗಳನ್ನು ತೆಗೆದರೆ ಈ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಾರ್ನಿಂಗ್‌ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ …

ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …

ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದ ಮಾಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ …

ಮೈಸೂರು : ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್‌ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ತಿಳಿಸಿದರು. ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ …

ವಯನಾಡು: ಮೆಪ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ. ಭೂಕುಸಿತದಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ಮೇಪ್ಪಾಡಿ ಪಾಲಿಟೆಕ್ನಿಕ್‌ನಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗಿದೆ. ಕಣ್ಣೂರು, ಕಲ್ಲಿಕೋಟೆ ಹಾಗೂ ತೃಶೂರ್‌ನ ವೈದ್ಯಕೀಯ ಕಾಲೇಜುಗಳಿಂದ ತಂಡಗಳನ್ನು ವಯನಾಡಿಗೆ ಕರೆತರಲಾಗಿದೆ. ಶಸ್ತ್ರಚಿಕಿತ್ಸೆ, ಹೃದ್ರೋಗ, ಮೂಳೆ …

ಮೈಸೂರು : ನಮ್ಮ ರಾಜ್ಯದ ವಿಚಾರ ಬಂದಾಗ ಕೇಂದ್ರ‌ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸುಳ್ಳು ಹೇಳಿದ್ದರು ಈಗಲೂ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು …

ಮೈಸೂರು : ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ನೀಡದೆ, ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್‌ ಅವರನ್ನು ಪ್ರಶ್ನಿಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು …

error: Content is protected !!