Mysore
25
overcast clouds
Light
Dark

Author: ಕೆ.ಬಿ. ರಮೇಶ ನಾಯಕ

Home/ಕೆ.ಬಿ. ರಮೇಶ ನಾಯಕ
ಕೆ.ಬಿ. ರಮೇಶ ನಾಯಕ

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

ಕೆ.ಬಿ.ರಮೇಶನಾಯಕ ಬಿಇಒ, ಎಚ್‌ಎಂಗಳಿಗೆ ದಿನ, ವಾರ, ತಿಂಗಳ ಟಾಸ್ಕ್ ಮಕ್ಕಳ ಕಲಿಕೆಗೆ 4 ಹಂತದ ಪ್ರಾಯೋಗಿಕ ಟೆಸ್ಟ್ ಸಿಎಂ ತವರಲ್ಲಿ ನಂ.1 ಗುರಿ ಹಾಕಿದ ಡಿಡಿಪಿಐ ಮೈಸೂರು: ಶೈಕ್ಷಣಿಕ ಕ್ಷೇತ್ರದ ತವರು ಎಂದೇ ಹಿರಿಮೆ ಹೊಂದಿರುವ ಮೈಸೂರು ಜಿಲ್ಲೆಯಲ್ಲಿ 2024-25ರ ಸಾಲಿನ …

ಕೆ.ಬಿ.ರಮೇಶನಾಯಕ ಮೈಸೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಕೊಡಲು ಸಾಧ್ಯವಾಗದೆ 5 ಕೆಜಿ ಬದಲಿಗೆ ಹಣ ಜಮಾ ಮಾಡುತ್ತಿರುವ ರಾಜ್ಯ ಸರ್ಕಾರ, ಅಕ್ಕಿಯನ್ನು ಹೊಂದಿಸಲು ಹೆಣಗಾಡುತ್ತಿರುವ ಹೊತ್ತಲ್ಲೇ ಎಪಿಎಲ್ ಪಡಿತರದಾರರಿಗೆ ಅಕ್ಕಿ ವಿತರಣೆ ಸ್ಥಗಿತವಾಗಿದೆ. ಮೈಸೂರು ಸೇರಿದಂತೆ …

ಮಡಿಲಿನಲ್ಲಿ ಕಬಿನಿ ಜಲಾಶಯ, ಸೆರಗಿನಲ್ಲಿ ಕನ್ನಂಬಾಡಿ ಕಟ್ಟೆಯನ್ನು ಹೊಂದಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯಲ್ಲಿ ಬರಗಾಲ ಎದುರಾದರೆ ನೀರಿಗಾಗಿ ಪರದಾಡುವುದು ತಪ್ಪುವು ದಿಲ್ಲ. ಆದರೆ, ಇಲ್ಲೊಂದು ಮನೆಯಲ್ಲಿ ನೀರಿನ ಅಭಾವ ಇರುವುದಿಲ್ಲ. ಹಾಗಾಗಿ ಆ ಕುಟುಂಬದವರು ನಿರಾಳವಾಗಿರುತ್ತಾರೆ! ತಿಂಗಳುಗಟ್ಟಲೆ ನೀರು ಬಾರ …

ಮೈಸೂರು: ಲಕ್ಷ ಲಕ್ಷ ಹಣ ಕೊಟ್ಟು ನಿವೇಶನ ಖರೀದಿಸಿ, ಸುಂದರವಾದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರೂ ಒಳಚರಂಡಿ (ಯುಜಿಡಿ) ಸಮಸ್ಯೆ ಎದುರಿ ಸುತ್ತಿರುವ ನಿವಾಸಿಗಳ ಬವಣೆ ಕೊನೆಗೂ ದೂರವಾಗುವ ಕಾಲ ಸನ್ನಿಹಿತವಾಗಿದೆ. ಯುಜಿಡಿ ಸಮಸ್ಯೆಯಿಂದ ಪುರಾತನ ಕಾಲದ ಅಯ್ಯಾಜಯ್ಯನ ಹುಂಡಿ,ಕೇರ್ಗಳ್ಳಿ ಕೆರೆಗಳು …

ಮೈಸೂರು: ದೇಶ-ವಿದೇಶಗಳ ಸಹಸ್ರಾರು ಪ್ರವಾಸಿಗರು ಭೇಟಿ ನೀಡುವ ಸಾಂಸ್ಕೃತಿಕ ನಗರಿ ಮೈಸೂರಿಗೆ ಕಂಟಕವಾಗಿರುವ ಮತ್ತು ಪರಿಸರವನ್ನು ದೊಡ್ಡ ಪ್ರಮಾಣದಲ್ಲಿ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಮರ್ಪಕವಾಗಿ ಮರು ಬಳಕೆ ಮಾಡುವ ಮೂಲಕ ಪರಿಸರದ ಮೇಲಾಗುತ್ತಿರುವ ಹಾನಿ ತಪ್ಪಿಸಲು ಮೈಸೂರು ನಗರ ಪಾಲಿಕೆಯು …

ಮೈಸೂರು: ನಗರದ ಹೃದಯಭಾಗ ಮತ್ತು ಜನವಸತಿ ಪ್ರದೇಶಗಳ ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯುವವರ ಮೇಲೆ ಕಣ್ಗಾವಲು ಇರಿಸಲು ನಗರ ಪಾಲಿಕೆಯು ವಿವಿಧೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಬೇಕಾಬಿಟ್ಟಿ ತ್ಯಾಜ್ಯ ಎಸೆಯುವವರಿಗೆ ದಂಡ ಬೀಳುವುದು ನಿಶ್ಚಿತವಾಗಿದೆ. ನಗರ ಪಾಲಿಕೆ …

ಮೈಸೂರು: ಮೇಲ್ಮನೆಯಲ್ಲಿ ಬಹುಮತ ಉಳಿಸಿಕೊಳ್ಳಲು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜಂಟಿ ಸಮರಕ್ಕಿಳಿದಿರುವ ಜಾದಳ-ಬಿಜೆಪಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದು, ನಾಲ್ಕು ಜಿಲ್ಲೆಗಳ ಹಾಲಿ-ಮಾಜಿ ಶಾಸಕರಿಗೆ ಚುನಾವಣಾ ಜವಾಬ್ದಾರಿ ಹೊರಿಸಿವೆ. ಶಿಕ್ಷಕರ ವಲಯದಲ್ಲಿ ತಮ್ಮದೇ …

ಮೇಲ್ಮನೆ ಸ್ಥಾನ: ಜಿಲ್ಲೆಯಲ್ಲಿ ಯಾರಿಗೆ ಒಲಿಯಲಿದೆ ಎಂಎಲ್‌ಸಿ! ಮೈಸೂರು: ವಿಧಾನಸಭೆಯಿಂದ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ತವರು ಕ್ಷೇತ್ರವಾದ ಮೈಸೂರು ಜಿಲ್ಲೆಯಲ್ಲಿ ಅನೇಕ ಮುಖಂಡರಲ್ಲಿ ಪರಿಷತ್ ಸದಸ್ಯ ಸ್ಥಾನ ಪೈಪೋಟಿಯ ಜತೆಗೆ ಲಾಬಿಯೂ ಜೋರಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ …

ಮೈಸೂರು: ದೇಶದ ಮಹಾಸಂಗ್ರಾಮ ಎಂದೇ ಹೇಳಲಾಗಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಒಂದಾದ ಜಾ. ದಳ - ಬಿಜೆಪಿ ನಾಯಕರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿಯೂ ಒಂದಾಗಿ ಅಖಾಡಕ್ಕೆ ಧುಮುಕಿದ್ದು, ಮೂರು ದಶಕಗಳ ಬಳಿಕ ಈ ಕ್ಷೇತ್ರದಲ್ಲಿ …

ಎರಡೂವರೆ ದಶಕಗಳ ಸಂಕಷ್ಟಕ್ಕೆ ಕೊನೆಗೂ ಮುಕ್ತಿ, ಬೆಟ್ಟದಷ್ಟಿರುವ ಕಸಕ್ಕೆ ಮುಕ್ತಿ ನೀಡಲು ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಶೀಘ್ರ ಪ್ರಾರಂಭ ಮೈಸೂರು: ಸಾಂಸ್ಕೃತಿಕನಗರಿಯ ಅರ್ಧ ಭಾಗದಷ್ಟು ಜನರ ಆರೋಗ್ಯಕ್ಕೆ ಕಂಟಕಪ್ರಾಯವಾಗಿರುವ ಜತೆಗೆ ಕಳೆದ ಎರಡೂವರೆ ದಶಕಗಳಿಂದ ಸಿವೇಜ್ ಫಾರ್ಮ್ ನಲ್ಲಿ (ಘನತ್ಯಾಜ್ಯ ಘಟಕ) …

  • 1
  • 2