Mysore
20
overcast clouds
Light
Dark

Author: ಕೆ.ಬಿ. ರಮೇಶ ನಾಯಕ

Home/ಕೆ.ಬಿ. ರಮೇಶ ನಾಯಕ
ಕೆ.ಬಿ. ರಮೇಶ ನಾಯಕ

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

ಮೈಸೂರು: ನಗರದ ಹೃದಯಭಾಗ ಮತ್ತು ಜನವಸತಿ ಪ್ರದೇಶಗಳ ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯುವವರ ಮೇಲೆ ಕಣ್ಗಾವಲು ಇರಿಸಲು ನಗರ ಪಾಲಿಕೆಯು ವಿವಿಧೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಬೇಕಾಬಿಟ್ಟಿ ತ್ಯಾಜ್ಯ ಎಸೆಯುವವರಿಗೆ ದಂಡ ಬೀಳುವುದು ನಿಶ್ಚಿತವಾಗಿದೆ. ನಗರ ಪಾಲಿಕೆ …

ಮೈಸೂರು: ಮೇಲ್ಮನೆಯಲ್ಲಿ ಬಹುಮತ ಉಳಿಸಿಕೊಳ್ಳಲು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜಂಟಿ ಸಮರಕ್ಕಿಳಿದಿರುವ ಜಾದಳ-ಬಿಜೆಪಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದು, ನಾಲ್ಕು ಜಿಲ್ಲೆಗಳ ಹಾಲಿ-ಮಾಜಿ ಶಾಸಕರಿಗೆ ಚುನಾವಣಾ ಜವಾಬ್ದಾರಿ ಹೊರಿಸಿವೆ. ಶಿಕ್ಷಕರ ವಲಯದಲ್ಲಿ ತಮ್ಮದೇ …

ಮೇಲ್ಮನೆ ಸ್ಥಾನ: ಜಿಲ್ಲೆಯಲ್ಲಿ ಯಾರಿಗೆ ಒಲಿಯಲಿದೆ ಎಂಎಲ್‌ಸಿ! ಮೈಸೂರು: ವಿಧಾನಸಭೆಯಿಂದ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ತವರು ಕ್ಷೇತ್ರವಾದ ಮೈಸೂರು ಜಿಲ್ಲೆಯಲ್ಲಿ ಅನೇಕ ಮುಖಂಡರಲ್ಲಿ ಪರಿಷತ್ ಸದಸ್ಯ ಸ್ಥಾನ ಪೈಪೋಟಿಯ ಜತೆಗೆ ಲಾಬಿಯೂ ಜೋರಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ …

ಮೈಸೂರು: ದೇಶದ ಮಹಾಸಂಗ್ರಾಮ ಎಂದೇ ಹೇಳಲಾಗಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಒಂದಾದ ಜಾ. ದಳ - ಬಿಜೆಪಿ ನಾಯಕರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿಯೂ ಒಂದಾಗಿ ಅಖಾಡಕ್ಕೆ ಧುಮುಕಿದ್ದು, ಮೂರು ದಶಕಗಳ ಬಳಿಕ ಈ ಕ್ಷೇತ್ರದಲ್ಲಿ …

ಎರಡೂವರೆ ದಶಕಗಳ ಸಂಕಷ್ಟಕ್ಕೆ ಕೊನೆಗೂ ಮುಕ್ತಿ, ಬೆಟ್ಟದಷ್ಟಿರುವ ಕಸಕ್ಕೆ ಮುಕ್ತಿ ನೀಡಲು ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಶೀಘ್ರ ಪ್ರಾರಂಭ ಮೈಸೂರು: ಸಾಂಸ್ಕೃತಿಕನಗರಿಯ ಅರ್ಧ ಭಾಗದಷ್ಟು ಜನರ ಆರೋಗ್ಯಕ್ಕೆ ಕಂಟಕಪ್ರಾಯವಾಗಿರುವ ಜತೆಗೆ ಕಳೆದ ಎರಡೂವರೆ ದಶಕಗಳಿಂದ ಸಿವೇಜ್ ಫಾರ್ಮ್ ನಲ್ಲಿ (ಘನತ್ಯಾಜ್ಯ ಘಟಕ) …

ಮೈಸೂರು: ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಯೊಂದಿಗೆ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯನ್ನು ಜಾರಿಗೆ ತಂದ ಆಶಯ ಇಂದು ನುಚ್ಚು ನೂರಾಗುತ್ತಿದ್ದು, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಾಗದ ಕಾರಣ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಆಡಳಿತಾಧಿಕಾರಿಗಳೇ ಮೂರು ವರ್ಷಗಳ ಕಾಲ …

ಮೈಸೂರು: ಮಗಳನ್ನು ಚೆನ್ನಾಗಿ ಓದಿಸಬೇಕೆಂಬ ಹಂಬಲ ಅಪ್ಪನದು. ಅಪ್ಪ-ಅಮ್ಮನ ಕನಸನ್ನು ನೆರವೇರಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ಹಗಲಿರುಳು ಓದಿದ ಫಲವಾಗಿ ಎಸ್.ಜಾಹ್ನವಿ ಜಿಲ್ಲೆಗೆ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಈಕೆ ಜೆಎಸ್‌ ಎಸ್ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ಹೆಬ್ಬಾಳು ಎರಡನೇ …

ಮೈಸೂರು: ನೆತ್ತಿ ಸುಡುವ ಬಿಸಿಲಿನತಾಪ, ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಕಾರ್ಯಕರ್ತರ ದಾಹ ನೀಗಿಸಲು ಹೆಚ್ಚಾಗಿ ಮೊಸರು, ಮಜ್ಜಿಗೆ ವಿತರಿಸುತ್ತಿದ್ದರಿಂದ ಕಳೆದ ಎರಡು ತಿಂಗಳಲ್ಲಿ ನಂದಿನಿ ಉತ್ಪನ್ನಗಳಲ್ಲಿ ಭರ್ಜರಿ ಮಾರಾಟವಾಗಿದೆ. ಮೇ ಅಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರಿದರೆ ಮೈಮುಲ್‌ಗೆ ಮತ್ತಷ್ಟು ಆದಾಯ …

  • 1
  • 2