Mysore
19
overcast clouds
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಬೆಂಗಳೂರು : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸ್ಪೀಕರ್‌ ಯುಟಿ ಖಾದರ್‌ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. …

ಬೆಂಗಳೂರು : ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭೇಟಿ ನೀಡಿರುವ ವಿಚಾರ ಸುದ್ದಿಯಾಗದಂತೆ ತಡೆಯಲು ಸರ್ಕಾರದಿಂದ ಯತ್ನಿಸಲಾಗಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ. ಈ ವಿಚಾರವಾಗಿ ಎಕ್ಸ್‌ ನಲ್ಲಿ ಜೆಡಿಎಸ್‌ ಅಭಿಪ್ರಾಯ ಹಂಚಿಕೊಂಡಿದ್ದು, ದುರಂತ ನಡೆದು …

ಬೆಂಗಳೂರು : ರಾಜ್ಯದಲ್ಲಿ ಸೈಬರ್‌ ಕ್ರೈಂಗಳ ಹಾವಳಿ ಹೆಚ್ಚಾಗುತ್ತಿದ್ದು, ಪ್ರತಿವರ್ಷ ಏನಿಲ್ಲಾ ಅಂದ್ರೂ ೧೦ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್‌ ವಂಚಕರ ಜಾಲಕ್ಕೆ ಬಿದ್ದು, ಜನರು ಲಕ್ಷಾಂತರ ರೂಪಾಯಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸೈಬರ್‌ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ರಾಜ್ಯ ಪೊಲೀಸ್‌ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದು ಸತ್ಯ ಆದರೆ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದಾರೆ. ಮುಡಾ ಹಗರಣ ಕುರಿತು ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಎಸ್‌ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್‌ ಆರ್‌ ರಮೇಶ್‌ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಸಿಎಂ ಆಗಿದ್ದ ವೇಳೆ ಭೂಹಗರಣ, …

ನವದೆಹಲಿ : ನೀಟ್‌ –ಯುಜಿ ೨೦೨೪ ಪರೀಕ್ಷೆ ಫಲಿತಾಂಶವನ್ನು  ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಇಂದು ಪ್ರಕಟ ಮಾಡಿದೆ. ಸುಪ್ರಿಂ ಕೋರ್ಟ್‌ ಸೂಚನೆ ಮೇರೆಗೆ ನಗರ ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು NTA NEET ನ ಅಧಿಕೃತ ವೆಬ್‌ …

ಬೆಂಗಳೂರು : ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ರೀಲ್ಸ್‌ ಮಾಡಿ ಬಹುಮಾನ ಗೆಲ್ಲಿ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಅಲ್ಲದೆ ಸಾವು ನೋವು ಕೂಡ ಸಂಭವಿಸುತ್ತಿವೆ. …

ಬೆಂಗಳೂರು : ಶಾಲಾ ಮಕ್ಕಳಿಗೆ ಅಜೀಮ್‌ ಪ್ರೇಮ್‌ ಜೀ ಪ್ರತಿಷ್ಠಾನದಿಂದ ವಾರದಲ್ಲಿ ೪ ಸಲ ಮೊಟ್ಟೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುವ ಮಕ್ಕಳಿಗೆ …

ಚಿಕ್ಕಮಗಳೂರು : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿನ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಚಿಕ್ಕಮಗಳೂರು ಜಿಲ್ಲೆ ಮೂಡಿಗೆಡೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿಯೂ ಭೂಕುಸಿತದ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುವ ಕಾರಣ …

ನವದೆಹಲಿ : ಪೂಜಾ ಖೇಡ್ಕರ್‌ ವಿವಾದದ ಬೆನ್ನಲ್ಲೆ  ಕೇಂದ್ರ ಲೋಕಸೇವಾ ಆಯೋಗದ ( UPSC) ಅಧ್ಯಕ್ಷ ಮನೋಜ್‌ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ೨೦೨೯ಕ್ಕೆ ಕೊನೆಗೊಳ್ಳಬೇಕಾಗಿತ್ತು. ಅದರೆ ೫ ವರ್ಷ ಅಧಿಕಾರದ ಅವಧಿ ಬಾಕಿಯಿರುವಾಗಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. …