Mysore
29
broken clouds

Social Media

ಶನಿವಾರ, 16 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಶಿವಮೊಗ್ಗ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಷಿಕ್ಯೂಷನ್‌ ಅನುಮತಿಸಿರುವುದು ಬಿಜೆಪಿ-ಜೆಡಿಎಸ್‌ ಸೇರಿ ನಡೆಸಿರುವ ಷಡ್ಯಂತ್ರವಾಗಿದೆ ಎಂದು ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಕಿಡಿಕಾರಿದರು. ಇಲ್ಲಿನ ಲಕ್ಕವಳ್ಳಿ ಭದ್ರಾ …

ಬೆಂಗಳೂರು: ಮುಡಾ ಹಗರಣ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದಾಗಿದೆ. ರಾಮಕೃಷ್ಣ ಹೆಗಡೆ ತರ ಸಿದ್ದರಾಮಯ್ಯ ಕೂಡಾ ರಾಜೀನಾಮೆ ಕೊಟ್ಟು ತನಿಖ ಎದುರಿಸಿ, ನಿರ್ದೋಷಿಯಾಗಿ ಬಂದು ಮತ್ತೆ ಸಿಎಂ ಗಾದಿಗೆ ಏರಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಪ್ರಾಷಿಕ್ಯೂಷನ್‌ಗೆ ಕೊಡಲಾಗಿಲ್ಲ, ಬದಲಾಗಿ ಈ ಹಗರಣದಲ್ಲಿ ನ್ಯಾಯಯುತವಾಗಿ ತನಿಖೆ ನಡೆಸಲು ಅನುಮತಿಸಲಾಗಿದೆ ಎಂದು ರಾಜ್ಯಪಾಲರ ನಡೆಯನ್ನು ಎಂಎಲ್‌ಸಿ ಸಿಟಿ ರವಿ ಸಮರ್ಥಿಸಿಕೊಂಡಿದ್ದಾರೆ. 13 ವರ್ಷಗಳ ಹಿಂದೆ ಬಿಎಸ್‌ ಯಡಿಯೂರಪ್ಪ …

ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ತಮಗೆ ಹೈ ಕಮಾಂಡ್‌ ಬೆಂಬಲ ನೀಡಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮುಡಾ ಹಗರಣ ಪ್ರಕರಣ ಸಂಬಂಧ ಮೈಸೂರು ಚಲೋ ಪಾದಯಾತ್ರೆ ನಡೆಸಿದ್ದ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ …

ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ( ಆಗಸ್ಟ್ 17 ) ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ …

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯಪಾಲ ಸ್ಥಾನದಿಂದ ವಜಾಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ …

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ನಗರದಲ್ಲಿಂದು (ಆ.17) ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ "ನಮ್ಮ‌ಅಭಿನಂದನೆ" ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇದು ನಿಮ್ಮೆಲ್ಲರ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್‌.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ …

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್‌ 17) ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ …

error: Content is protected !!