Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಹಂಪಿ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಯಲ್ಲಿ ರಾಜ್ಯದ ಪ್ರಮುಖ ಡ್ಯಾಂಗಳು ಭಾಗಶಃ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಇದೇ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಬಗ್ಗೆ ಒಂದು ಮೊಟ್ಟೆಯ ಕಥೆ ಚಿತ್ರದ ಹೀರೋ ರಾಜ್‌ ಬಿ ಶೆಟ್ಟಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ದರ್ಶನ್‌ ಪರ ವಿರೋಧ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ರಾಜ್‌ ಬಿ …

ಉತ್ತರ ಕನ್ನಡ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಜೋರಾದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಏಳು ಮಂದಿ ಸಾವಿಗೀಡಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮಣ್ಣಿನಡಿ ಸಿಲುಕಿಕೊಂಡಿರುವ 9 …

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 24ನೇ ವಾರ್ಷಿಕ ಘಟಿಕೋತ್ಸವ ಜುಲೈ. 18 ರಂದು ನಡೆಯಲಿದೆ ಎಂದು ಕುಲಪತಿ ಪ್ರೊ. ಎಸ್‌ ವಿದ್ಯಾಶಂಕರ್‌ ಸೋಮವಾರ (ಜು.15) ತಿಳಿಸಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗವರ್ನರ್‌ ಥಾವರ್‌ಚಂದ್‌ ಗೆಹ್ಲೋಟ್‌ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ …

ಚೆನ್ನೈ: ಕರ್ನಾಟಕದ ಜೀವನದಿ ಕಾವೇರಿ ಕಾವು ಬಹಳ ಜೋರಾಗಿದ್ದು, ಅಂತರಾಜ್ಯ ಬಿಕ್ಕಟ್ಟು ಬಗೆಹರಿಸುವ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಅವರು ಮಂಗಳವಾರ (ಜು.16) ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಮೊನ್ನೆ ಅಷ್ಟೆ ಸಿಡಬ್ಲ್ಯೂಆರ್‌ಸಿ ಸೂಚಿಸಿದಂತೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಒಪ್ಪದ …

ಬೆಂಗಳೂರು: ಸತತ ಎರಡು ಬಾರಿ ಪರೀಕ್ಷಾ ಫಲಿತಾಂಶ ನೋಡಿದ್ದು, ಅದರಲ್ಲಿ ತೃಪ್ತಿ ಹೊಂದದ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶ ಸಿಕ್ಕಿದ್ದು, ಅದರಲ್ಲಿ ತೇರ್ಗಡೆ ಹೊಂದಿದ ಅಥವಾ ಹೆಚ್ಚು ಅಂಕ ಗಳಿಸಲು ಕಾಯುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ …

ಬೆಂಗಳೂರು: ಇದೇ ಆಗಸ್ಟ್‌ 1ರಿಂದ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಸುಧಾಕರ್‌ ರಾವ್‌ ನೇತೃತ್ವದ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಇದೇ …

ಇಸ್ಲಾಮಾಬಾದ್:‌ ಜೈಲಿನಲ್ಲಿರುವ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಲಿಸ್ತಾನ ತಹ್ರಿಕ್‌ ಎ ಇನ್ಸಾಫ್‌ ಪಕ್ಷ ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್‌ ಷರೀಫ್‌ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಪಾಕ್‌ ಸಚಿವ ಅತ್ತಾವುಲ್ಲಾ …

ಉತ್ತರಾಖಂಡ್:‌ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ತಿಳಿಸಿದ್ದಾರೆ. ಉತ್ತರಾಖಂಡದ ಗರ್ವಾಲ್‌ ಹಿಮಾಲಯ ಶ್ರೇಣಿಯಲ್ಲಿರುವ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ್‌ ದೇವಾಲಯವು ವಿಶ್ವ ಪ್ರಸಿದ್ಧಿ ಪಡೆದಿದೆ. …

error: Content is protected !!