Mysore
27
overcast clouds

Social Media

ಶನಿವಾರ, 20 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು:  ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಲದರ್ಶಿನಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ಇದೇ ಸಂಸರ್ಭದಲ್ಲಿ ಡೆಂಗಿ ಜ್ವರ ನಿಯಂತ್ರಣದ ಸಂಬಂಧ ಜನರಿಗೆ ಜಾಗೃತಿ ಮೂಡಿಸಲು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. …

ಉತ್ತರ ಪ್ರದೇಶ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (52 ವರ್ಷ) ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಆಗ್ರಹಿಸಿದ್ದಾರೆ. ಪರೆಂಬೂರಿನ ಖಾಸಗಿ ಶಾಲೆಯೊಂದರಲ್ಲಿ ಆರ್ಮ್‌ಸ್ಟ್ರಾಂಗ್‌ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, …

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಜನ್ಮದಿನವಿಂದು. ಭಾರತ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡ ಇವರು ಇಂದು (ಜುಲೈ.7) 43ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಟೀಂ ಇಂಡಿಯಾ ಪರವಾಗಿ 15 ವರ್ಷಗಳ ಕಾಲ ಆಟವಾಡಿರುವ ಮಹಿ, ತನ್ನ ಕ್ರಿಕೆಟ್‌ …

ಮೈಸೂರು: 2024-25 ನೇ ಸಾಲಿನ ಜಲವರ್ಷದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯು ಪ್ರಾರಂಭವಾಗಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಬರುತ್ತಿದೆ. ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ (ಜುಲೈ.7) ಬೆಳ್ಳಂಬೆಳಿಗ್ಗೆಯೇ ಅಗ್ನಿ ಅವಘಡ ಸಂಭವಿಸಿದೆ. ವಿದ್ಯಾರ್ಥಿ ನಿಲಯದ ಪವರ್‌ ಪ್ಯಾನೆಲ್‌ನಲ್ಲಿ ಇಂದು ಬೆಳಿಗ್ಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಪವರ್‌ ಪ್ಯಾನೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗ್ರೌಂಡ್‌ ಪ್ಲೋರ್‌ನಲ್ಲಿ ಬೆಂಕಿ …

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಹಚ್ಚು ಹಿಡಿದಿದೆ ಹಾಗಾಗಿ ಅವರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಾ ಬರುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರಿಗೆ ನನ್ನನ್ನು ನೆನೆಸಿಕೊಳ್ಳದಿದ್ದರೇ ನಿದ್ದೆಯೂ ಬರುವುದಿಲ್ಲ, …

ಕೊಡಗು: ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರವೂ ಕೂಡಾ ಭಾರೀ ಮಳೆ ಬಂದಿದೆ. ಜಿಲ್ಲೆಯಲ್ಲಿ ಹೆಚ್ಚಾದ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಸಂಪಾಜೆಯ ಚಂಬು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯೊಂದು ಕುಸಿದಿದೆ. ಭಾರೀ ಮಳೆಯಿಂದಾಗಿ ಭಾಗಮಂಡಲ, ಸಂಪಾಜೆ, ಮಡಿಕೇರಿ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಮಳೆ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು. ಇಂದು (ಜುಲೈ.5) ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ತಾಲ್ಲೂಕು ಪಂಚಾಯತ್ …

ಮಹಾರಾಷ್ಟ್ರ: ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ತಂಡಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರು 11 ಕೋಟಿ ಬಹುಮಾನ ಘೋಷಿಸಿದ್ದಾರೆ. ಆ ಮೂಲಕ ಟೀಂ ಇಂಡಿಯಾ ಆಟಗಾರರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ …

ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್‌ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮುಡಾ ಆಕ್ರಮಿಸಿಕೊಂಡಿರುವ ಜಾಗದ ಬಗ್ಗೆ ಮುಖ್ಯಮಂತ್ರಿ ಆದ …

error: Content is protected !!