ಬಾ.ನಾ. ಸುಬ್ರಮಣ್ಯ

ಅದೃಷ್ಟ ಒಲಿದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಭಾರೀ ಗಟ್ಟಿಯಾಗಿದ್ದು, ಅದೃಷ್ಟ ಒಲಿದು ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಈಗ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಇದ್ದಾರೆ. 138 ಸ್ಥಾನದಿಂದ ಕಾಂಗ್ರೆಸ್ ಸುಭದ್ರವಾಗಿದೆ. ಅದೃಷ್ಟ ಒಲಿದು ಬಂದಾಗ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. 1996 ರಿಂದ 2004ರವರೆಗೆ ಸಿದ್ದರಾಮಯ್ಯ ಸಿಎಂ ಆಗ್ತಾರೆ ಅನ್ಕೊಂಡು ಬಂದ್ರು ಅದು ಆಗಲಿಲ್ಲ. ಈಗ ಡಿ.ಕೆ.ಶಿವಕುಮಾರ್ ನಡೆ ಬಗ್ಗೆ ನನಗೆ ಗೊತ್ತಿಲ್ಲ. ಆ ರಾಜಕೀಯದ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ. ಇದರ ಬಗ್ಗೆ ಡಿಕೆಶಿ ಜೊತೆಗೂ ಕೂಡ ನಾನು ಮಾತನಾಡಿಲ್ಲ ಎಂದರು,

ಇನ್ನು ಮಾರ್ಚ್‌.7ರಂದು ರಾಜ್ಯ ಬಜಟ್‌ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಇಲಾಖೆಗಳ ಜೊತೆ ಪ್ರಗತಿ ಪರಿಶೀಲನೆ ಸಭೆ ಮಾಡ್ತಿದೀನಿ. ಕುಡಿಯುವ ನೀರು, ನಗರಾಭಿವೃದ್ದಿ ಪ್ರಾಧಿಕಾರ ಸ್ಥಳೀಯ ಪಂಚಾಯತಿಗಳಿಗೆ ವರ್ಗಾವಣೆ ಆಗಿದೆ. ಆದ್ರೆ ಸ್ಥಳೀಯ ಆಡಳಿತದಲ್ಲಿ ಹಣವಿಲ್ಲ. ಹೀಗಾಗಿ ಈ ವಿಚಾರವನ್ನು ಸಿಎಂ ಗಮನಕ್ಕೆ ತರುತ್ತೇನೆ. ಅದಕ್ಕೂ ಮುನ್ನ ಸಭೆ ಮಾಡುತ್ತಿದ್ದೇನೆ ಎಂದರು.

ಇನ್ನು ರಾಜ್ಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಕಬಿನಿಯಿಂದ 120 ಎಂ.ಎಲ್.ಡಿ ನೀರು ತರಬೇಕು. ಇದಕ್ಕೆ ಬಜೆಟ್‌ನಲ್ಲಿ ಹಣ ಕೇಳಿದ್ದೇವೆ. ನನ್ನ ಕ್ಷೇತ್ರದ ನೀರಿನ ಸಮಸ್ಯೆ, ಯುಜಿಡಿ ಸಮಸ್ಯೆ ಎಲ್ಲವನ್ನೂ ಸರಿ ಮಾಡಬೇಕು. ಪಟ್ಟಣ ಪಂಚಾಯತ್‌ಗಳನ್ನು ಸೇರಿಸಿ ಗ್ರೇಟರ್ ಮೈಸೂರು ಮಾಡಿ ಎಂದು ಹೇಳಿದ್ದೇನೆ. ಬಜೆಟ್‌ನಲ್ಲಿ ಇದನ್ನು ಸೇರಿಸಿ ಎಂದು ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Share
Published by
ಕೆಂಡಗಣ್ಣಸ್ವಾಮಿ

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

9 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

9 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

11 hours ago