ವಿಧಾನ ಪರಿಷತ್‌: ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಪುಟ್ಟಣ್ಣ ಗೆಲುವು

ಬೆಂಗಳೂರು: ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಅವರು ಗೆಲುವು ಸಾಧಿಸಿದ್ದಾರೆ.

2200 ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಪುಟ್ಟಣಯ್ಯ ಗೆಲುವಿನ ನಗೆ ಬೀರಿದ್ದಾರೆ. ಈ ಜಯಭೇರಿಯ ಮೂಲಕ ಪುಟ್ಟಣ್ಣ ಅವರು ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದಂತಾಗಿದೆ.