Mysore
22
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಮದ್ದೂರು: ಎಕ್ಸ್ಪ್ರೆಸ್‌ವೇನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಕೆಎಸ್‌ಆರ್‌ಟಿಸಿಯ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸರಣಿ ಅಪಘಾತ ಸಂಭವಿಸಿದೆ. ಮದ್ದೂರು ಬೈಪಾಸ್ …

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿಯಾದರು. ಪ್ರಫುಲ್ ಪಟೇಲ್, ಛಗನ್ ಭುಜಬಲ್ ಹಾಗೂ ಎನ್​ಸಿಪಿಯ ಕೆಲವು ಸಚಿವರು ಉಪಸ್ಥಿತರಿದ್ದರು. ಜುಲೈ 2 ರಂದು …

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಸೆಣಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು …

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ. ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ …

ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಹಿನ್ನೆಲೆ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಜೆ.ಮಧುಕರ್​​ನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಭಾನುವಾರ ಆದೇಶ ಹೊರಡಿಸಿದ್ದಾರೆ. ಜೂನ್ 27ರಂದು ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿತ್ತು. ಮರ್ಯಾದಾ …

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್‌ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ. ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು …

ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಉತ್ತರ ಪ್ರದೇಶದ ಮೀರಠ್‌ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ …

ನವದೆಹಲಿ: ಚೀನಾದ ಆತಿಥ್ಯದಲ್ಲಿ ನಡೆಯಲಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ನಲ್ಲಿ ಟೀಮ್ ಇಂಡಿಯಾವನ್ನು ಸಿಎಸ್‌ಕೆಯ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದು, ಮಹಾ ಕ್ರೀಡಾಕೂಟದಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದು ಕೊಡುವುದೇ ನನ್ನ ಮಹತ್ತರ ಕನಸಾಗಿದೆ ಎಂದು ತಮ್ಮ ಹೆಬ್ಬಯಕೆ …

ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಎರಡು ಗಂಡು ಸಿಂಹದ ಮರಿಗಳು ಮತ್ತು ಒಂದು ಹೆಣ್ಣು ಸಿಂಹದ ಮರಿಗೆ ಅನುಕ್ರಮವಾಗಿ ಸೂರ್ಯ, ಚಂದ್ರ ಮತ್ತು ಕಬಿನಿ ಎಂಬ ಹೆಸರನ್ನಿಡಲಾಯಿತು. ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ …

ಚಾಮರಾಜನಗರ : ಕಳೆದ 18 ದಿನಗಳಿಂದ ಸ್ಥಳೀಯ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ 18 ದಿನಗಳಿಂದ ಜನರಲ್ಲಿ ಆತಂಕ ಉಂಟು …

Stay Connected​
error: Content is protected !!