ಅಡಿಲೇಡ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ ಹಾದಿ ಸುಗಮಗೊಳಿಸಲು ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. …










