ಮೈಸೂರು : ನಗರದ ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿ ಮಹಾರಥೋತ್ಸವವು ಅದ್ದೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಜಂಬೂಸವಾರಿ ಬಳಿಕ ಮೊದಲ ಹುಣ್ಣಿಮೆಯಲ್ಲಿ ಬೆಟ್ಟದಲ್ಲಿ ಜರುಗುವ ಮಹಾರಥೋತ್ಸವವು ಇಂದು ಬೆಳಿಗ್ಗೆ 7.50 ರಿಂದ 8.10ರೊಳಗೆ …










