ಬೆಳಗಾವಿ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಬುಧವಾರ ಬೆಳಗಿನ ಜಾವ 3.30ಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲಿಸಿದಾಗ ಅಕ್ರಮ ಹಣ ಪತ್ತೆಯಾಗಿದೆ.
ಹಿರೇಬಾಗೇವಾಡಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಈ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಓರ್ವ ಆರೋಪಿ ವಶಕ್ಕೆ ಪಡೆಯಲಾಗಿದೆ’ ಎಂದರು.
ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್.ಎಸ್.ಟಿ. ತಂಡದ ಮುಖ್ಯಸ್ಥ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಹಾಜರಿದ್ದರು.