ಬೆಂಗಳೂರು : ಅಸಮಾನತೆಯನ್ನು ಪೋಷಿಸುವ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಿರುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿದವರಿಗೆ 10 ಕೋಟಿ ರೂ. ಗಳನ್ನು ಘೋಷಿಸಿದ್ದ ಅಯೋಧ್ಯೆ ಮೂಲದ ಧರ್ಮದರ್ಶಿ ಪರಮಹಂಸ ಆಚಾರ್ಯರ ಹೇಳಿಕೆಗೆ ಬಹು ಭಾಷಾ ನಟ ಕಿಶೋರ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ʼʼಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ. ವಿಶ್ವಮಾನವರಾಗುವʼʼ ಎಂದು ಕರೆ ನೀಡಿದ್ದಾರೆ.
ʼಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?ʼʼ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ʼʼಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕುʼʼ ಎಂದು ಟೀಕಿಸಿದ್ದಾರೆ.
ʼʼವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು , ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ. ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇʼʼ ಎಂದು ಪ್ರಶ್ನಿಸಿದ್ದಾರೆ.
ʼಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲʼʼ ಎಂದು ಹೇಳಿದ್ದಾರೆ.
ʼʼಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳೋಣʼʼ ಎಂದು ನಟ ಕಿಶೋರ್ ಕುಮಾರ್ ಕರೆ ನೀಡಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…