BREAKING NEWS

ʼದಾರಿತಪ್ಪಿಸುವ ಈ ಧರ್ಮಾಂಧ ರಾಜಕೀಯದ ಬಗ್ಗೆ ಎಚ್ಚರವಾಗಿರೋಣʼ: ನಟ ಕಿಶೋರ್‌

ಬೆಂಗಳೂರು : ಅಸಮಾನತೆಯನ್ನು ಪೋಷಿಸುವ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಿರುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿದವರಿಗೆ 10 ಕೋಟಿ ರೂ. ಗಳನ್ನು ಘೋಷಿಸಿದ್ದ ಅಯೋಧ್ಯೆ ಮೂಲದ ಧರ್ಮದರ್ಶಿ ಪರಮಹಂಸ ಆಚಾರ್ಯರ ಹೇಳಿಕೆಗೆ ಬಹು ಭಾಷಾ ನಟ ಕಿಶೋರ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಅವರು, ʼʼಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ. ವಿಶ್ವಮಾನವರಾಗುವʼʼ ಎಂದು ಕರೆ ನೀಡಿದ್ದಾರೆ.

ʼಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?ʼʼ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ʼʼಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕುʼʼ ಎಂದು ಟೀಕಿಸಿದ್ದಾರೆ.

ʼʼವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು , ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ. ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇʼʼ ಎಂದು ಪ್ರಶ್ನಿಸಿದ್ದಾರೆ.

ʼಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲʼʼ ಎಂದು ಹೇಳಿದ್ದಾರೆ.

ʼʼಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳೋಣʼʼ ಎಂದು ನಟ ಕಿಶೋರ್‌ ಕುಮಾರ್‌ ಕರೆ ನೀಡಿದ್ದಾರೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago