BREAKING NEWS

ದೇವೇಗೌಡರ ಸ್ವಾರ್ಥದಿಂದಾಗಿ ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್‌ ಆಯ್ತು: ಸಚಿವ ವೆಂಕಟೇಶ್‌

ಮೈಸೂರು: ಮೈಸೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ರಾಜವಂಶಸ್ಥ ಯದುವೀರ್‌ ಅವರ ಹೆಸರೇ ಇರಲಿಲ್ಲ. ಆದರೆ, ದೇವೇಗೌಡರೇ ನಮ್ಮ ಸಮಾಜದ ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿಸಿ ಯದುವೀರ್‌ ಅವರಿಗೆ ಟಿಕೆಟ್‌ ಸಿಗುವಂತೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನಗರದ ಕಾಂಗ್ರೆಸ್‌ ಸಮಾವೇಶದಲ್ಲಿಂದು ಮಾತನಾಡದ ಅವರು, ಮಂಡ್ಯ, ಹಾಸನಕ್ಕೆ ಅನುಕೂಲವಾಗುವಂತೆ ಅವರ ಸ್ವಾರ್ಥಕ್ಕಾಗಿ ಮೈಸೂರು ಕ್ಷೇತ್ರಕ್ಕೆ ಯುದುವೀರ್‌ ಅವರನ್ನು ದೇವೇಗೌಡರು ನಿಲ್ಲಿಸಿದ್ದಾರೆ ಎಂದು ಸಚಿವ ವೆಂಕಟೇಶ್‌ ಹರಿಹಾಯ್ದರು.

ನಾನು ದೇವೇಗೌಡರ ಹತ್ತಿರದ ಸಂಬಂಧಿಯಾಗಿದ್ದೇನೆ. ಅವರ ಸ್ವಾರ್ಥದಿಂದಾಗಿ ನಾನು ಅವರಿಂದ ದೂರ ಉಳಿದೆ. ರಾಜಕೀಯವೇ ಬೇಡ ಎನ್ನುವಾಗ ಸಿಎಂ ಸಿದ್ದರಾಮಯ್ಯ ಅವರು ನನ್ನನ್ನು ರಾಜಕೀಯದಲ್ಲಿ ಉಳಿಸಿಕೊಂಡರು ಎಂದು ನೆನೆದರು.

ನಾನು ದೇವೇಗೌಡರ ಹತ್ತಿರ ಸಂಬಂಧಿ. ಅವರು ಸ್ವಾರ್ಥ ಎಂಬ ಕಾರಣಕ್ಕೆ ನಾನು ದೂರ ಉಳಿದೆ. ನಾನು ರಾಜಕೀಯ ಸಾಕು, ಬಿಡಬೇಕು ಅಂದ್ಕೊಂಡಿದ್ದೆ. ಸಿಎಂ ಸಿದ್ದರಾಮಯ್ಯ ರಾಜಕಾರಣದಲ್ಲಿ ಉಳಿಸಿಕೊಂಡರು ಎಂದರು.

ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಾತಿ ಕಾರ್ಟ್‌ ಪ್ಲೇ ಸಂಬಂಧ ಮಾತನಾಡಿ, ಪ್ರತಾಪ್‌ ಸಿಂಹ ಅವರು ಎಂ. ಲಕ್ಷ್ಮಣ್‌ ಅವರನ್ನು ಒಕ್ಕಲಿಗನಲ್ಲ ಎಂದು ಹೇಳಿದ್ದರು. ಆದರೆ ನಾಯ ಯಾವ ಜಾತಿಗೆ ಸೇರಿದ್ದೇನೋ ಲಕ್ಷ್ಮಣ್‌ ಅವರು ಅದೇ ಜಾತಿಗೆ ಸೇರಿದ್ದಾರೆ. ತಮ್ಮ ಕುಟುಂಬದ ಸದಸ್ಯರ ಮಾಹಿತಿಯನ್ನು ಸಹಾ ಬಿಚ್ಚಿಟ್ಟಿದ್ದಾರೆ. ಲಕ್ಷ್ಮಣ್‌ ಒಕ್ಕಲಿಗ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರತಾಪ್‌ ಬೇರೆ ಕಡೆಯಿಂದ ಬಂದವರು. ಲಕ್ಷ್ಮಣ್‌ ಮೈಸೂರಿನವರೇ ಆಗಿದ್ದಾರೆ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

6 mins ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

23 mins ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

47 mins ago

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

1 hour ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

2 hours ago