ಲಕ್ನೋ : ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿಸ್ಟಾಲಿನ್ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.
ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು ಕೈಯಲ್ಲಿ ಕತ್ತಿ ಹಿಡಿದುಕೊಂಡು ಉದಯನಿಧಿ ಅವರ ಶಿರಚ್ಛೇದನವನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ವೀಡಿಯೊವನ್ನ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್‌ಗೆ ಬೆಂಕಿ ಹಚ್ಚುವ ದೃಶ್ಯವನ್ನೂ ವೀಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಡಿಎಂಕೆ ಸಚಿವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್, ಸ್ವಾಮೀಜಿಯೊಬ್ಬರು ನನ್ನ ತಲೆಗೆ 10 ಕೋಟಿ ರೂ. ಬೆಲೆ ಕಟ್ಟಿದ್ದಾರೆ. ಅವರು ನಿಜವಾದ ಸಂತನೋ ಅಥವಾ ನಕಲಿ ಸಂತನೋ? ನನ್ನ ತಲೆಯನ್ನು ಏಕೆ ಅಷ್ಟು ಇಷ್ಟಪಡುತ್ತೀರಿ? ನಿಮಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ? ನನ್ನ ತಲೆ ಕೂದಲು ಬಾಚುವುದಕ್ಕೆ ಏಕೆ 10 ಕೋಟಿ ರೂ. ಘೋಷಣೆ ಮಾಡಿದ್ದೀರಿ? 10 ರೂಪಾತಿ ಬಾಚಣಿಗೆ ಕೊಟ್ಟರೆ ನಾನೇ ಬಾಚಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…