Mysore
28
broken clouds

Social Media

ಬುಧವಾರ, 28 ಜನವರಿ 2026
Light
Dark

ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ

ಬೆಂಗಳೂರು: ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ಶಾಕ್ ಎನ್ನುವಂತೆ ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.

ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಈ ವರ್ಷದಿಂದಲೇ ಪೂರ್ವಾನ್ವಯ ವಾಗುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ದಾಖಲಾಗುವ ಹಾಗೂ ಕಾಮೆಡ್-ಕೆ ಕೋಟಾದಡಿಯ ಸೀಟುಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಎಂಜಿನಿಯರಿಂಗ್ ಸೀಟುಗಳ ಸರ್ಕಾರಿ ಕೋಟಾದಡಿಯ ಖಾಸಗಿ ಶಾಲೆಗಳ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಆದರೇ, ಇದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ ನಿರ್ಧಾರವಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲೇ ತೀರ್ಮಾನ ಆಗಿತ್ತು. ಈಗ ಜಾರಿಗೊಳ್ಳುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

ನಿಯಮಾನುಸಾರ ಕ್ರಮವನ್ನು ಹಿಂದಿನ ಸರ್ಕಾರ ಕೈಗೊಂಡಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಡಿಮೆ ಮಾಡುವ, ಹಿಂಪಡೆಯುವ ಪ್ರಶ್ನೆ ಇಲ್ಲ. ಶೀಘ್ರವೇ ಶೇ.10ರಷ್ಟು ಶುಲ್ಕ ಹೆಚ್ಚಳದ ಅನುಸಾರ ಪರಿಷ್ಕೃತ ಶುಲ್ಕದ ಮಾಹಿತಿ ಪ್ರಕಟಿಸಲಾಗುವುದು ಎಂದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!