ನೀರಜ್‌ ಚೋಪ್ರಾಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶಿನಾಥ್‌ ನಾಯ್ಕ್‌ಗೆ 10 ಲಕ್ಷ ಬಹುಮಾನ

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಜಯಿಸಿದ ನೀರಜ್ ಚೋಪ್ರಾ ಅವರ ತರಬೇತುದಾರ ಕಾಶಿನಾಥ್‌ ನಾಯ್ಕ್‌ ಅವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.

ಪದಕ ಜಯಿಸಿದ ನೀರಜ್‌ ಚೋಪ್ರಾಗೆ ಅಭಿನಂದನೆ ಸಲ್ಲಿಸಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಈ ಸಾಧನೆಗೆ ತರಬೇತಿ ನೀಡಿದ ಕನ್ನಡಿಗ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು ಬಹುಮಾನ ಘೋಷಿಸಿದ್ದಾರೆ.

ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಕನ್ನಡಿಗನ ಪಾತ್ರವೂ ಇದೆ. 2010ರ ಕಾಮನ್ವೆಲ್ತ್‌ನಲ್ಲಿ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕ‌ಗಳಿಸಿದ್ದರು. ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣ ಪದಕ ಗಳಿಸಿ ದೇಶದ ಗೌರವ ಹೆಚ್ಚಿಸಿದ್ದಾರೆ.

× Chat with us