BREAKING NEWS

ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಕೇರಳ ಸರ್ಕಾರ

ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್‌ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್​​.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಬಾಲಕನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ನಿಹಾಲ್‌ನ ಸಾವಿನ ಕೆಲವು ದಿನಗಳ ನಂತರ, ಮುಜಪ್ಪಿಲಂಗಾಡ್‌ನಲ್ಲಿ ಬೀದಿ ನಾಯಿ ದಾಳಿಯಿಂದ ಮತ್ತೊಬ್ಬ ಶಾಲಾ ಬಾಲಕಿ ಜಾನ್ವಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಳೆದ ವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ರೇಬಿಸ್ ಸೋಂಕಿನಿಂದ ಸಾವನ್ನಪ್ಪಿದ ಕೋಝಿಕ್ಕೋಡ್ ಮೂಲದ ಶೀಬಾಕುಮಾರಿ ಅವರ ಕುಟುಂಬಕ್ಕೆ ಕೇರಳ ಸರ್ಕಾರ 2 ಲಕ್ಷ ರೂ. ನೀಡಲಾಗಿದೆ.

ನಿಹಾಲ್ ನೌಶಾದ್ ಮೇಲೆ ನಾಯಿಗಳ ದಾಳಿ: ಕೇರಳದ ಕಣ್ಣೂರು ಜಿಲ್ಲೆಯ ಮುಜಪ್ಪಿಲಂಗಾಡ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಭಾನುವಾರ ರಾತ್ರಿ ಪತ್ತೆಯಾಗಿದ್ದಾನೆ.  ಬೀದಿನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕ, ವಾಕ್ ದೋಷದಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಬಾಲಕ ತನ್ನ ಮನೆಯಿಂದ ನಾಪತ್ತೆಯಾಗಿದ್ದನು. ಬಾಲಕ ಆಟವಾಡಲು ಹೋಗುತ್ತಿದ್ದ ಸಮೀಪದ ಪ್ಲಾಟ್‌ನಲ್ಲಿ ಹುಡುಕಿದ್ದಾರೆ. ಅಲ್ಲಿ ಆತ ನೆಲದ ಮೇಲೆ ಬಿದ್ದಿದ್ದು, ರಕ್ತಸ್ರಾವವಾಗುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ರಾತ್ರಿ 8.30 ರ ಹೊತ್ತಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದ್ದಾರೆ,

ಮರಣೋತ್ತರ ಪರೀಕ್ಷೆ ಬಳಿಕ ನಿಹಾಲ್ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಬೀದಿ ನಾಯಿಗಳ ಹಿಂಡು ದಾಳಿಯಲ್ಲಿ ಬಾಲಕನ ತೊಡೆಯ ಒಂದು ಭಾಗವನ್ನು ತಿಂದಿದೆ. ಘಟನೆಯ ನಂತರ, ಸ್ಥಳೀಯ ಸಂಸ್ಥೆಯು ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಸೆರೆಹಿಡಿಯಲು ಪ್ರಾರಂಭಿಸಿದ್ದಾರೆ.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

5 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

5 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

5 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

6 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

7 hours ago