ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಬಾಲಕನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ನಿಹಾಲ್‌ನ ಸಾವಿನ ಕೆಲವು ದಿನಗಳ ನಂತರ, ಮುಜಪ್ಪಿಲಂಗಾಡ್‌ನಲ್ಲಿ ಬೀದಿ ನಾಯಿ ದಾಳಿಯಿಂದ ಮತ್ತೊಬ್ಬ ಶಾಲಾ ಬಾಲಕಿ ಜಾನ್ವಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಳೆದ ವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ರೇಬಿಸ್ ಸೋಂಕಿನಿಂದ ಸಾವನ್ನಪ್ಪಿದ ಕೋಝಿಕ್ಕೋಡ್ ಮೂಲದ ಶೀಬಾಕುಮಾರಿ ಅವರ ಕುಟುಂಬಕ್ಕೆ ಕೇರಳ ಸರ್ಕಾರ 2 ಲಕ್ಷ ರೂ. ನೀಡಲಾಗಿದೆ.
ನಿಹಾಲ್ ನೌಶಾದ್ ಮೇಲೆ ನಾಯಿಗಳ ದಾಳಿ: ಕೇರಳದ ಕಣ್ಣೂರು ಜಿಲ್ಲೆಯ ಮುಜಪ್ಪಿಲಂಗಾಡ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಭಾನುವಾರ ರಾತ್ರಿ ಪತ್ತೆಯಾಗಿದ್ದಾನೆ. ಬೀದಿನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕ, ವಾಕ್ ದೋಷದಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಬಾಲಕ ತನ್ನ ಮನೆಯಿಂದ ನಾಪತ್ತೆಯಾಗಿದ್ದನು. ಬಾಲಕ ಆಟವಾಡಲು ಹೋಗುತ್ತಿದ್ದ ಸಮೀಪದ ಪ್ಲಾಟ್‌ನಲ್ಲಿ ಹುಡುಕಿದ್ದಾರೆ. ಅಲ್ಲಿ ಆತ ನೆಲದ ಮೇಲೆ ಬಿದ್ದಿದ್ದು, ರಕ್ತಸ್ರಾವವಾಗುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ರಾತ್ರಿ 8.30 ರ ಹೊತ್ತಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದ್ದಾರೆ,
ಮರಣೋತ್ತರ ಪರೀಕ್ಷೆ ಬಳಿಕ ನಿಹಾಲ್ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಬೀದಿ ನಾಯಿಗಳ ಹಿಂಡು ದಾಳಿಯಲ್ಲಿ ಬಾಲಕನ ತೊಡೆಯ ಒಂದು ಭಾಗವನ್ನು ತಿಂದಿದೆ. ಘಟನೆಯ ನಂತರ, ಸ್ಥಳೀಯ ಸಂಸ್ಥೆಯು ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಸೆರೆಹಿಡಿಯಲು ಪ್ರಾರಂಭಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…