BREAKING NEWS

ಸರ್ಕಾರಿ ಪರೀಕ್ಷಾ ಅಕ್ರಮಕ್ಕೆ ಸಾಭೀತಾದರೆ 10 ವರ್ಷ ಜೈಲು, 1 ಕೋಟಿ ದಂಡ!

ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಅಕ್ರಮಗಳ ವಿರುದ್ಧ ಕಠಿಣವಾಗಿ ವ್ಯವಹರಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

ಈ ಮಸೂದೆಯಲ್ಲಿ ಸರ್ಕಾರಿ ಪರೀಕ್ಷಾ ಅಕ್ರಮ ಸಾಬೀತಾದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ ದಂಡ ಹೇರಲಾಗುತ್ತದೆ.

ವಿರೋಧ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ಕೆಲವು ತಿದ್ದುಪಡಿಗಳನ್ನು ತಿರಸ್ಕರಿಸಿದ ನಂತರ ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿತು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲು, ಅಕ್ರಮ ತಡೆಗಾಗಿ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಬಳಿಕ ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತದೆ. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತ ನಂತರ ರಾಷ್ಟ್ರಪತಿ ಸಹಿಗೆ ಕಳುಹಿಸಲಾಗುತ್ತದೆ. ರಾಷ್ಟ್ರಪತಿ ಅಂಗೀಕಾರದ ಬಳಿಕ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ.

ವಿಧೇಯಕದಲ್ಲಿನ ಪ್ರಮುಖಾಂಶಗಳು
1.ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವವರಿಗೆ ಕನಿಷ್ಠ 3-5 ವರ್ಷಗಳ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ಸೇರಿದಂತೆ ಕಠಿಣ ಕ್ರಮಗಳನ್ನು ಸೂಚಿಸುತ್ತದೆ. ಸಂಘಟಿತ ಅಪರಾಧ ಪ್ರಕರಣಗಳಲ್ಲಿ 5-10 ವರ್ಷಗಳ ಸಜೆ, 1 ಕೋಟಿ ರೂ. ದಂಡ ದೊರೆಯಲಿದೆ.
2. ಈ ಕಾನೂನಿನ ವ್ಯಾಪ್ತಿಯು ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು, ರೈಲ್ವೆ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಸೇರಿ ವಿವಿಧ ಸಾರ್ವಜನಿಕ ಪರೀಕ್ಷೆಗಳನ್ನು ಒಳಗೊಂಡಿದೆ.
3.ಶಿಕ್ಷಣ ಸಂಸ್ಥೆಗಳು ಅಕ್ರಮಗಳಲ್ಲಿ ತೊಡಗಿದ್ದರೆ ಆಸ್ತಿಯ ಜಪ್ತಿಯ ಜತೆಗೆ ಪರೀಕ್ಷಾ ವೆಚ್ಚ ವಸೂಲಿ ಮಾಡಲಾಗುವುದು.
4.ಅಕ್ರಮಗಳು ಕಂಡುಬಂದರೆ ಪರೀಕ್ಷೆಗಳನ್ನು ನಡೆಸುವ ಸೇವಾ ಪೂರೈಕೆದಾರ ಸಂಸ್ಥೆಗಳಿಗೆ 1 ಕೋಟಿ ರೂ.ಗಳವರೆಗೆ ದಂಡ ವಿಧಿಸುವ ಬಗ್ಗೆ ಪ್ರಸ್ತಾವವಿದೆ. ಅಂತಹ ಸಂಸ್ಥೆಗಳು ಅಕ್ರಮ ಎಸಗಿರುವುದು ಸಾಬೀತಾದರೆ ನಾಲ್ಕು ವರ್ಷಗಳವರೆಗೆ ಸಾರ್ವಜನಿಕ ಪರೀಕ್ಷೆಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗುವುದು.
5.ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಗ್ಯಾಂಗ್‌, ಮಾಫಿಯಾಗಳನ್ನು ನಿಯಂತ್ರಿಸುವ ಉದ್ದೇಶವನ್ನು ಮಸೂದೆ ಹೊಂದಿದೆ.
6.ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆಯನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿ ನಡೆಸಲಿದ್ದಾರೆ. ತನಿಖೆಯನ್ನು ಯಾವುದೇ ಕೇಂದ್ರ ಸಂಸ್ಥೆಗೆ ಒಪ್ಪಿಸುವ ಅಧಿಕಾರ ಕೇಂದ್ರ ಸರ್ಕಾರದ ಬಳಿಯೇ ಇರಲಿದೆ.
7.ಈ ಕಾಯಿದೆ ಅಭ್ಯರ್ಥಿಯ ರಕ್ಷಣೆಗೆ ಒತ್ತು ನೀಡುತ್ತದೆ.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

10 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

12 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

15 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

20 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

28 mins ago