Mysore
22
scattered clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 104 ಹೊಸ ಕೊವಿಡ್‌ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆ

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ತ ದಿನದಿಂದ ದಿನಕ್ಕೆ ರಾಜ್ಯದಲ್ಲಿಯೂ ಕೊವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.

ರಾಜ್ಯದಲ್ಲಿ ಇಂದು ( ಡಿಸೆಂಬರ್‌ 23 ) ಒಟ್ಟು 104 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 104 ಹೊಸ ಪ್ರಕರಣಗಳು ವರದಿಯಾಗಿದ್ದರೆ, 8 ಜನ ಡಿಸ್‌ಚಾರ್ಜ್‌ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದ್ದು, ಕೊನೆಯ 24 ಗಂಟೆಗಳಲ್ಲಿ 1752 ಟೆಸ್ಟ್‌ಗಳು ನಡೆದಿವೆ, 1195 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 557 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 5.93% ಇದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 271 ಸಕ್ರಿಯ ಪ್ರಕರಣಗಳ ಪೈಕಿ 258 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 13 ಸೋಂಕಿತರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 7 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 7, ಮಂಡ್ಯದಲ್ಲಿ 1 ಹಾಗೂ ಚಾಮರಾಜನಗರದಲ್ಲಿ 2 ಹೊಸ ಕೊವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 12, ಮಂಡ್ಯದಲ್ಲಿ 2 ಹಾಗೂ ಚಾಮರಾಜನಗರದಲ್ಲಿ 2 ಸಕ್ರಿಯ ಪ್ರಕರಣಗಳಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!