ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ತ ದಿನದಿಂದ ದಿನಕ್ಕೆ ರಾಜ್ಯದಲ್ಲಿಯೂ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.
ರಾಜ್ಯದಲ್ಲಿ ಇಂದು ( ಡಿಸೆಂಬರ್ 23 ) ಒಟ್ಟು 104 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 104 ಹೊಸ ಪ್ರಕರಣಗಳು ವರದಿಯಾಗಿದ್ದರೆ, 8 ಜನ ಡಿಸ್‌ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದ್ದು, ಕೊನೆಯ 24 ಗಂಟೆಗಳಲ್ಲಿ 1752 ಟೆಸ್ಟ್‌ಗಳು ನಡೆದಿವೆ, 1195 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 557 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 5.93% ಇದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಒಟ್ಟು 271 ಸಕ್ರಿಯ ಪ್ರಕರಣಗಳ ಪೈಕಿ 258 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 13 ಸೋಂಕಿತರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 7 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 7, ಮಂಡ್ಯದಲ್ಲಿ 1 ಹಾಗೂ ಚಾಮರಾಜನಗರದಲ್ಲಿ 2 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 12, ಮಂಡ್ಯದಲ್ಲಿ 2 ಹಾಗೂ ಚಾಮರಾಜನಗರದಲ್ಲಿ 2 ಸಕ್ರಿಯ ಪ್ರಕರಣಗಳಿವೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…