ನವದೆಹಲಿ : ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್, ತೃಣಮೂಲ ಕಾಂಗ್ರೆಸ್ ನಾಯಕರಾದ ಡೆರೆಕ್ ಒಬ್ರಿಯಾನ್, ಸಾಕೇತ್ ಗೋಖಲೆ ಸಹಿತ 11 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.
ಆಡಳಿತಾರೂಢ ಬಿಜೆಪಿಯು ಸ್ಥಾನವನ್ನು ಗಳಿಸಿದೆ ಹಾಗೂ ಬಹುಮತವಿಲ್ಲದ ರಾಜ್ಯಸಭೆಯಲ್ಲಿ 93 ಸದಸ್ಯರನ್ನು ಹೊಂದಿದೆ.
ಜುಲೈ 24 ರಂದು ಪಶ್ಚಿಮ ಬಂಗಾಳದಲ್ಲಿ ಆರು, ಗುಜರಾತ್ ನಲ್ಲಿ ಮೂರು ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಮತದಾನ ನಡೆಯುವುದಿಲ್ಲ.
ಆರು ತೃಣಮೂಲ ಕಾಂಗ್ರೆಸ್ ಹಾಗೂ ಐದು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಅವಿರೋಧವಾಗಿ ಆಯ್ಕೆಯಾದ ಇತರ ತೃಣಮೂಲ ಕಾಂಗ್ರೆಸ್ ನಾಯಕರುಗಳೆಂದರೆ: ಸುಖೇಂದು ಶೇಖರ್ ರಾಯ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಬಾರಿಕ್.