BREAKING NEWS

ಆರ್‌ಸಿಬಿ ಮಾಡಿದ ತಪ್ಪಿನಿಂದ ಫಾಫ್‌ ಡು ಪ್ಲೆಸಿಸ್‌ಗೆ 12 ಲಕ್ಷ ರೂ. ದಂಡ

ಬೆಂಗಳೂರು : ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (IPL) ಟೂರ್ನಿಯ 15ನೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣದಿಂದಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸೋಮವಾರ ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಆರ್‌ಸಿಬಿ, ತನ್ನ ಪಾಲಿನ 20 ಓವರ್‌ಗಳಿಗೆ 212 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಲಖನೌ ಸೂಪರ್‌ ಜಯಂಟ್ಸ್ ತಂಡಕ್ಕೆ 213 ರನ್‌ಗಳ ಬೃಹತ್‌ ಮೊತ್ತದ ಗುರಿಯನ್ನು ನೀಡಿತ್ತು. ಬಳಿಕ ಗುರಿ ಹಿಂಬಾಲಿಸಿದ ಲಖನೌ ಸೂಪರ್‌ ಜಯಂಟ್ಸ್‌ ತಂಡ ಕೇವಲ ಒಂದು ವಿಕೆಟ್‌ನಿಂದ ರೋಚಕ ಗೆಲುವು ಸಾಧಿಸಿತ್ತು.

ಅಂದಹಾಗೆ ಲಖನೌ ಸೂಪರ್‌ ಜಯಂಟ್ಸ್‌ ಇನಿಂಗ್ಸ್‌ನಲ್ಲಿ ನಿಗದಿತ ಸಮಯಕ್ಕೆ 20 ಓವರ್‌ಗಳನ್ನು ಪೂರ್ಣಗೊಳಿಸುವಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ನಾಯಕ ಫಾಫ್‌ ಡು ಪ್ಲೆಸಿಸ್‌ ಅವರಿಗೆ 12 ಲಕ್ಷ ರೂ. ದಂಡವನ್ನು ಐಪಿಎಲ್ ಅಧಿಕಾರಿಗಳು ವಿಧಿಸಿದ್ದಾರೆ.ನಿಗದಿತ ಸಮಯದಲ್ಲಿ 20 ಓವರ್‌ಗಳನ್ನು ಪೂರ್ಣಗೊಳಿಸುವಲ್ಲಿ ವಿಫಲವಾದ ಆರ್‌ಸಿಬಿ, ಐಪಿಎಲ್‌ ಮೊದಲನೇ ಹಂತದ ನಿಯಮವನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ಗೆ 12 ಲಕ್ಷ ರೂ. ದಂಡವನ್ನು ವಧಿಸಲಾಗಿದೆ. ಈ ವಿಷಯದಲ್ಲಿ ಪಂದ್ಯದ ರೆಫರಿಗಳ ತೀರ್ಮಾನ ಅಂತಿಮವಾಗಿದೆ. ಪ್ರಸಕ್ತ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಮೊದಲ ಪ್ರಕರಣ ಇದಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಆವೇಶ್‌ ಖಾನ್‌ಗೆ ಛೀಮಾರಿ ಹಾಕಿದ ಐಪಿಎಲ್‌ : ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಒಂದು ರನ್‌ ಬೈಸ್‌ ಓಡಿದ ಬೆನ್ನಲ್ಲೆ ಲಖನೌ ಸೂಪರ್ ಜಯಂಟ್ಸ್‌ ತಂಡ ಒಂದು ವಿಕೆಟ್‌ ರೋಚಕ ಗೆಲುವನ್ನು ತನ್ನದಾಗಿಸಿಕೊಂಡಿತು. ಈ ವೇಳೆ ಒಂದು ರನ್‌ ಪೂರ್ಣಗೊಳಿಸಿದ ಬಳಿಕ ಆವೇಶ್‌ ಖಾನ್ ತನ್ನ ಹೆಲ್ಮೆಟ್‌ ಅನ್ನು ನೆಲಕ್ಕೆ ಜೋರಾಗಿ ಹೊಡೆದರು. ಈ ಹಿನ್ನೆಲೆಯಲ್ಲಿ ಯುವ ವೇಗಿಗೆ ಛೀಮಾರಿಯನ್ನು ಹಾಕಲಾಗಿದೆ. “ಲಖನೌ ಸೂಪರ್‌ ಜಯಂಟ್ಸ್ ತಂಡದ ಆವೇಶ್‌ ಖಾನ್‌ ಅವರು ಐಪಿಎಲ್‌ ಕೋಡ್‌ ಆಫ್ ಕಂಡಕ್ಟ್‌ನ 2.2ಕ್ಕೆ ಸಂಬಂಧಿಸಿದಂತೆ ಮೊದಲ ಹಂತದ ನಿಯಮವನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಛೀಮಾರಿ ಹಾಕಲಾಗಿದೆ. ಇದನ್ನು ಅವರು ಕೂಡ ಸ್ವೀಕರಿಸಿದ್ದಾರೆ,” ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕೊನೆಯ ಓವರ್‌ನಲ್ಲಿ ಹೈ-ಡ್ರಾಮಾ : ಸೋಮವಾರ ರಾತ್ರಿ ಬೆಂಗಳೂರು ಹಾಗೂ ಲಖನೌ ನಡುವಣ ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿತ್ತು. 20ನೇ ಓವರ್‌ನಲ್ಲಿ 5 ರನ್‌ ಅಗತ್ಯವಿದ್ದಾಗ ಮಾರ್ಕ್‌ವುಡ್‌ ಹಾಗೂ ಜಯದೇವ್‌ ಉನಾದ್ಕಟ್‌ ಅವರು ವಿಕೆಟ್‌ ಒಪ್ಪಿಸಿದ್ದರು. ಇದರ ನಡುವೆ ಕೊನೆಯ ಎಸೆತದಲ್ಲಿ ಒಂದು ರನ್‌ ಅಗತ್ಯವಿದ್ದಾಗ, ಹರ್ಷಲ್‌ ಪಟೇಲ್‌ ಮಂಕಡಿಂಗ್‌ ರನ್‌ಔಟ್‌ ಮಾಡಬಹುದಾದ ಅವಕಾಶವನ್ನು ಕೈಚೆಲ್ಲಿಕೊಳ್ಳುತ್ತಾರೆ. ಅಂತಿಮವಾಗಿ ಬೈಸ್‌ ರೂಪದಲ್ಲಿ ಒಂದು ರನ್‌ ಪಡೆಯುವ ಮೂಲಕ ಲಖನೌ ಒಂದು ವಿಕೆಟ್‌ ರೋಚಕ ಗೆಲುವು ತನ್ನದಾಗಿಸಿಕೊಳ್ಳುತ್ತದೆ.

lokesh

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

27 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago