ಮುಂಬೈ : ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ತಾಪ ತಾಳಲಾರದೇ 14 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಏಕನಾಥ ಶಿಂದೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಒತ್ತಾಯಿಸಿದ್ದಾರೆ.
ಮುಂಬೈನ ಖಾರ್‌ಘರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರು ಮೃತಪಟ್ಟಿರುವ ಬಗ್ಗೆ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿರುವ ಅವರು, ‘ಇವು ಕಾಲ್ತುಳಿತದಿಂದ ಸಂಭವಿಸಿದ ಸಾವೇ? ಸರ್ಕಾರ ಏನನ್ನು ಮುಚ್ಚಿಡಲು ಯತ್ನಿಸುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ಕಾರ್ಯಕ್ರಮದ ವಿಡಿಯೊವನ್ನು ಲಗತ್ತಿಸಿದ್ದಾರೆ. ಅದರಲ್ಲಿ ಜನರು ತೀವ್ರ ಬಳಲಿರುವ, ನಿತ್ರಾಣಗೊಂಡಿರುವ ದೃಶ್ಯವಿದೆ.
‘ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಬೇಕು’ ಎಂದು ಆಗ್ರಹ ಮಾಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…