ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 148 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 248 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1144 ಇದೆ. ಕೊನೆಯ 24 ಗಂಟೆಗಳಲ್ಲಿ 7305 ಟೆಸ್ಟ್‌ಗಳು ನಡೆದಿವೆ, 6237 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 1068 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.02% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದಾರೆ. ವಿಜಯನಗರದ 45 ವರ್ಷದ ಸೋಂಕಿತ ಸಾವನ್ನಪ್ಪಿದ್ದಾರೆ.
ಒಟ್ಟು 1144 ಸಕ್ರಿಯ ಪ್ರಕರಣಗಳ ಪೈಕಿ 1089 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 55 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 23 ಸೋಂಕಿತರು ಐಸಿಯುನಲ್ಲಿದ್ದು, 32 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 94, ಮಂಡ್ಯದಲ್ಲಿ 40, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 26 ಸಕ್ರಿಯ ಪ್ರಕರಣಗಳಿವೆ.