ಟಾಟಾ ಸಹಯೋಗದಲ್ಲಿ 4,636 ಕೋಟಿ  ವೆಚ್ಚದಲ್ಲಿ150 ಐ.ಟಿ.ಟಿ : ಸಚಿವ ಅಶ್ವಥ್‌

ಬೆಂಗಳೂರು: ‘ಉದ್ಯೋಗ’ ಕಾರ್ಯದಕ್ರಮಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ 150 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಟಿ) ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿವೆ. ಆಧುನಿಕ ಕೋರ್ಸ್ ಗಳನ್ನು ಒಳಗೊಂಡ ತರಬೇತಿಯು ಈ ಕೇಂದ್ರಗಳಲ್ಲಿ ನ.1ರಿಂದ ಆರಂಭವಾಗಲಿದೆ ಎಂದು ಕೌಶಾಲಾಭಿವೃದ್ಧಿ ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ ತಿಳಿಸಿದರು.

ನಗರದ ಪೀಣ್ಯದಲ್ಲಿ ಮೇಲ್ದರ್ಜೆಗೇರಿಸಿರುವ ಸರ್ಕಾರಿ ಐಟಿಐ ಕೇಂದ್ರವನ್ನು ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೊಸ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

ಉದ್ಯಮಗಳ ಈಗಿನ ಬೇಡಿಕೆಗೆ ತಕ್ಕಂತೆ ಹೊಸ ಪಠ್ಯಕ್ರಮ ರೂಪಿಸಲಾಗಿದೆ. ಅಡ್ವಾನ್ಸ್ಡ್ ಸಿ.ಎನ್.ಸಿ. ಮಷೀನಿಂಗ್, ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್, ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್, ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಮತ್ತು ಮೆಕ್ಯಾನಿಕ್ ಎಲೆಕ್ಟ್ರಿಕ್  ವೆಹಿಕಲ್ ಇವುಗಳಲ್ಲಿ ಸೇರಿವೆ ಎಂದು ಸಚಿವರು ವಿವರಿಸಿದರು.

ಈ ಸಂಸ್ಥೆಗಳಲ್ಲಿ ಜೆಟಿಒ ಗಳಿಗೆ ಹೊಸ ತಾಂತ್ರಿಕತೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಇದರಿಂದ ಪ್ರತಿವರ್ಷ 20,000 ಜೆಟಿಒ ಗಳಿಗೆ ಅನುಕೂಲವಾಗುತ್ತದೆ. ಇದರ ಜೊತೆಗೆ ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಪ್ರಯೋಜನವಾಗುತ್ತದೆ ಎಂದರು.

ಟಾಟಾ ಕಂಪನಿಯೊಂದಿಗೆ ದೀರ್ಘಾವಧಿ ಸಹಭಾಗಿತ್ವ ಹೊಂದುವ ಉದ್ದೇಶವಿದ್ದು ಮೊದಲ ಎರಡು ವರ್ಷಗಳಿಗಾಗಿ 300 ಹಾಗೂ ಮೂರನೇ ವರ್ಷಕ್ಕಾಗಿ 150 ವಿಷಯ ಪರಿಣತರನ್ನು ನಿಯೋಜಿಸಲಾಗುತ್ತದೆ. ಇದರಿಂದ ಜೆಟಿಒ ಗಳಿಗೆ ಹಾಗೂ ಐಟಿಐ ಬೋಧಕ ಸಿಬ್ಬಂದಿಗೆ ಹೊಸ ರೀತಿಯ ತರಬೇತಿಗಳ ಬಗ್ಗೆ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.

× Chat with us