BREAKING NEWS

16ನೇ ವಿಧಾನಸಭೆ ಚುನಾವಣೆ : ಮತದಾರರಿಗೆ ಹಕ್ಕು ಚಲಾಯಿಸಲು ವಿಶೇಷ ಸವಲತ್ತುಗಳನ್ನು ಕಲ್ಪಿಸಿದ ಚುನಾವಣಾ ಆಯೋಗ

ಬೆಂಗಳೂರು- 16ನೇ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಚುನಾವಣಾ ಆಯೋಗ ವಿಶೇಷವಾದ ಸವಲತ್ತುಗಳನ್ನು ಕಲ್ಪಿಸಿದೆ.
ರಾಜ್ಯದಲ್ಲಿ 31 ಕಂದಾಯ ಜಿಲ್ಲೆಗಳಿದ್ದು, 34 ಚುನಾವಣಾ ಜಿಲ್ಲೆಗಳಾಗಿ ವಿಂಗಡಿಸಲಾಗಿದೆ.
ರಾಜ್ಯದ ಜನಸಂಖ್ಯೆ 2011 ರ ಜನಗಣತಿಯ ಪ್ರಕಾರ 6.1 ಕೋಟಿಗಳಿದ್ದು, ಸುಮಾರು 50 ರಷ್ಟು ಮಹಿಳೆಯರು ಹಾಗೂ ಪುರುಷರಿದ್ದಾರೆ. ಪುರುಷರು 3.09 ಕೋಟಿ (50.6%) ಮಹಿಳೆಯರು 3.01 ಕೋಟಿ (49.34%), 224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ ಮೀಸಲಾಗಿರುವ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ.
ಒಟ್ಟಾರೆಯಾಗಿ ರಾಜ್ಯದಲ್ಲಿ 5,21,76,579 ಕೋಟಿ ಮತದಾರರು ಇದ್ದಾರೆ. ಇದರಲ್ಲಿ 2,62,42,561 ಮಹಿಳಾ ಮತದಾರರು ಹಾಗೂ 2,59,26,319 ಪುರುಷ ಮತದಾರರು ಇದ್ದಾರೆ.
5,55,073 ವಿಶೇಷ ಚೇತನ ಮತದಾರರು, 80 ವರ್ಷಕ್ಕೂ ಹೆಚ್ಚಿನ ವಯಸ್ಸಿನ 12,15,763 ಮತ್ತು 100 ನೇ ವಯಸ್ಸು ದಾಟಿರುವ 16,976 ಜನ ಮತದಾರರಿದ್ದಾರೆ. ಮೊದಲ ಬಾರಿಗೆ (18-19 ವಯಸ್ಸಿನ) 9,17,241 ಮತದಾರರು ನೊಂದಣಿಯಾಗಿದ್ದಾರೆ.

ಮನೆಯಿಂದಲೇ ಮತದಾನಕ್ಕೆ ಅವಕಾಶ: ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ 80 ವರ್ಷಕ್ಕೂ ಹೆಚ್ಚಿನ ವಯಸ್ಸಿನ ಹಾಗೂ ವಿಶೇಷ ಚೇತನರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು.
ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯಗಳನ್ನು ಮಾಡಲಾಗಿದೆ. ಆದರೂ ಮತದಾನ ಕೇಂದ್ರಕ್ಕೆ ಆಗಮಿಸಲು ಸಾಧ್ಯವಾಗದೇ ಇರುವಂತಹ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಎಲ್ಲಾ ರೀತಿಯ ಮುನ್ನೆಚ್ಚರಿಕೆಯನ್ನು ತಗೆದುಕೊಂಡು ಪಾರದರ್ಶಕವಾದ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಿಶೇಷ ಚೇತನ ಮತದಾರರಿಗೆ ಮತಗಟ್ಟೆಗಳಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಮನೆಯಿಂದ ಮತಗಟ್ಟೆಗೆ ಪಿಕ್ ಅಂಡ್ ಡ್ರಾಪ್, ಸಕ್ಷಮ್ ಆಪ್ ಮೂಲಕ ತಮಗೆ ಬೇಕಾದ ಸೌಲಭ್ಯಗಳ ಬಗ್ಗೆ ಮೊದಲೇ ನೊಂದಾಯಿಸಿಕೊಳ್ಳುವ ಅವಕಾಶ. ವೀಲ್ ಚೇರ್, ಪ್ರಿಯಾರಿಟಿ ವೋಟಿಂಗ್, ದೃಷ್ಟಿ ದೋಷದ ಮತದಾರರಿಗೆ ಬೈಲ್ ಬ್ಯಾಲಟ್ ಪೇಪರ್ ನಂತಹ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗುವುದು.

ಮೊದಲ ಬಾರಿ ಮತದಾರರಿಗೆ ಒತ್ತು: ಚುನಾವಣಾ ಆಯೋಗದ ಪ್ರಯತ್ನದಿಂದ ಈ ಬಾರಿ 9.17 ಲಕ್ಷ ಮೊದಲ ಬಾರಿಯ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಅಲ್ಲದೇ, ಅಡ್ವಾನ್ಸ್ ಅಪ್ಲಿಕೇಷನ್ ಸೌಲಭ್ಯದ ಮೂಲಕ ಈಗಾಗಲೇ 1.25 ಲಕ್ಷ ಯುವಕರು ಅರ್ಜಿಗಳನ್ನು ಸಲ್ಲಿಸಿದ್ದು, ಅದರಲ್ಲಿ 41,000 ಮತದಾರರು ಏಪ್ರಿಲ್ 1ರಿಂದ ಮತದಾನಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.
ತೃತೀಯ ಲಿಂಗಿಗಳಿಗೂ ಅವಕಾಶ: ರಾಜ್ಯದಲ್ಲಿ ಸುಮಾರು 42,756 ಜನ ತೃತೀಯ ಲಿಂಗಿಗಳಿದ್ದು, ಇವರಲ್ಲಿ 41,312 ಜನರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಲಾಗಿದೆ. ಇವರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎನ್ನುವುದು ಆಯೋಗದ ಆಶಯವಾಗಿದೆ.

ಮತಗಟ್ಟೆಗಳ ಸ್ಥಾಪನೆ : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಪ್ರತಿ ಮತಗಟ್ಟೆಗೆ ಸರಾಸರಿ 883 ಮತದಾರರಂತೆ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ನಗರ ಪ್ರದೇಶಗಳಲ್ಲಿ 24,063 ಮತ್ತು ಗ್ರಾಮೀಣ ಪ್ರದೇಶದಲ್ಲಿ 34,219 ಮತಗಟ್ಟೆಗಳು ಇರಲಿವೆ.
ವಿಶೇಷವಾಗಿ 1320 ಮಹಿಳಾ ಮತಗಟ್ಟೆಗಳು, 224 ಯುವ ಅಧಿಕಾರಿಗಳು ನಿರ್ವಣೆಯ, 224 ವಿಶೇಷ ಚೇತನರು ಮತ್ತು 240 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು.
ರಾಜ್ಯದ ಸುಮಾರು 1200 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿದ್ದು ಇವುಗಳ ನಿರ್ವಹಣೆಗೆ ಅಗತ್ಯ ಹೆಚ್ಚಿನ ಭದ್ರತೆಯ ಸೌಲಭ್ಯಗಳನ್ನು ಒದಗಿಸಲಾಗುವುದು. ರಾಜ್ಯದ ಶೇಕಡಾ 50ರಷ್ಟು ಮತಗಟ್ಟೆಗಳು ವೆಬ್ ಕಾಸ್ಟಿಂಗ್ ಸೌಲಭ್ಯ ಹೊಂದಿವೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

21 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

21 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

21 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

22 hours ago