BREAKING NEWS

ದರ್ಶನ್‌ ಸೇರಿ 17 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಂಬಂಧ ಪವಿತ್ರಾಗೌಡ ಹಾಗೂ ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು ಪೊಲೀಸ್‌ ಕಸ್ಟ್‌ಡಿಗೆ ನೀಡುವಂತೆ ನ್ಯಾಧೀಶರು ಆದೇಶಿಸಿದ್ದಾರೆ.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಅವರ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಇಂದು ಬೆಳಗ್ಗೆ ದರ್ಶನ್‌ ಅವರನ್ನು ಬಂಧಿಸಲಾಗಿತ್ತು.

ದರ್ಶನ್‌ ಸೇರಿದಂತೆ 17ಮಂದಿ ಆರೋಪಿಗಳನ್ನು ಪೊಲೀಸ್‌ ವಿಚಾರಣೆಗೆ ಒಳಪಡಿಸಿದ ಬಳಿಕ ಆರೋಪಿಗಳನ್ನು ನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಯಿತು.  ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಬಂದ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು.

ಪ್ರಕರಣದ ಸಂಬಂಧ ದರ್ಶನ್‌ ಹಾಗೂ ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳನ್ನು ಪೊಲೀಸ್‌ ಕಸ್ಟ್‌ಡಿಗೆ ನೀಡುವಂತೆ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ್‌ ಆದೇಶ ನೀಡಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

2 mins ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

4 mins ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

37 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

50 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

56 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

2 hours ago