Mysore
23
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಇವಿ ಬ್ಯಾಟರಿ ಚಾರ್ಜ್​​ಗೆ ಶೇ 18 ಸೇವಾ ತೆರಿಗೆ : ಎಎಆರ್‌

ಬೆಂಗಳೂರು : ಕರ್ನಾಟಕದಲ್ಲಿ ಎಲೆಕ್ಟ್ರಿಕ್‌ ವಾಹನ ಮಾಲೀಕರು ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸಲು ಚಿಂತನೆ ನಡೆಸುತ್ತಿರುವವರಿಗೆ ‘ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ (ಎಎಆರ್‌)’ ಆಘಾತ ನೀಡಿದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಶೇ 18ರ ಸೇವಾ ತೆರಿಗೆ ಅನ್ವಯವಾಗುತ್ತದೆ ಎಂದು ಎಎಆರ್ ಹೇಳಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಎಎಆರ್ ಈ ಹೇಳಿಕೆ ನೀಡಿದೆ.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸರಕುಗಳ ಪೂರೈಕೆ ಅಥವಾ ಸೇವಾ ಪೂರೈಕೆ ಎಂದು ಪರಿಗಣಿಸಬೇಕೇ ಎಂಬ ಬಗ್ಗೆ ಸ್ಪಷ್ಟೀಕರಣ ಪಡೆಯಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಅನ್ನು ಸಂಪರ್ಕಿಸಿತ್ತು.

ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸೇವಾ ಪೂರೈಕೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದಕ್ಕಿರುವ ಪ್ರಸ್ತುತ ದರದ ಶೇ 18 ಸೇವಾ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ತಿಳಿಸಿದೆ. ಚಾರ್ಜಿಂಗ್ ಘಟಕಕ್ಕೆ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ (ITC) ಪ್ರಯೋಜನ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಶೇ 18 ರ ಸೇವಾ ತೆರಿಗೆ ವಿಧಿಸುವ ಕ್ರಮವು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಘಟಕಗಳ ಸ್ಥಾಪನೆಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಕರ್ನಾಟಕದಲ್ಲಿ ಇವಿ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಚಿಂತನೆ ನಡೆಸಿತ್ತು. ಇದೇ ಕಾರಣಕ್ಕೆ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಬಳಿ ಸ್ಪಷ್ಟನೆ ಕೋರಿತ್ತು ಎಂದು ನ್ಯೂಸ್‌ 9 ವರದಿ ಉಲ್ಲೇಖಿಸಿದೆ.

ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಮತ್ತು ದೆಹಲಿ ನಂತರದ ಸ್ಥಾನದಲ್ಲಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ