ಬೆಂಗಳೂರು : ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನ ಮಾಲೀಕರು ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಸಲು ಚಿಂತನೆ ನಡೆಸುತ್ತಿರುವವರಿಗೆ ‘ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ (ಎಎಆರ್)’ ಆಘಾತ ನೀಡಿದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಶೇ 18ರ ಸೇವಾ ತೆರಿಗೆ ಅನ್ವಯವಾಗುತ್ತದೆ ಎಂದು ಎಎಆರ್ ಹೇಳಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಎಎಆರ್ ಈ ಹೇಳಿಕೆ ನೀಡಿದೆ.
ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸರಕುಗಳ ಪೂರೈಕೆ ಅಥವಾ ಸೇವಾ ಪೂರೈಕೆ ಎಂದು ಪರಿಗಣಿಸಬೇಕೇ ಎಂಬ ಬಗ್ಗೆ ಸ್ಪಷ್ಟೀಕರಣ ಪಡೆಯಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಅನ್ನು ಸಂಪರ್ಕಿಸಿತ್ತು.
ಬ್ಯಾಟರಿಗಳನ್ನು ಚಾರ್ಜ್ ಮಾಡುವುದನ್ನು ಸೇವಾ ಪೂರೈಕೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದಕ್ಕಿರುವ ಪ್ರಸ್ತುತ ದರದ ಶೇ 18 ಸೇವಾ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ತಿಳಿಸಿದೆ. ಚಾರ್ಜಿಂಗ್ ಘಟಕಕ್ಕೆ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಪ್ರಯೋಜನ ಲಭ್ಯವಾಗಲಿದೆ ಎಂದು ಅದು ಹೇಳಿದೆ.
ಶೇ 18 ರ ಸೇವಾ ತೆರಿಗೆ ವಿಧಿಸುವ ಕ್ರಮವು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಘಟಕಗಳ ಸ್ಥಾಪನೆಗೆ ಹಿನ್ನಡೆಯಾಗಬಹುದು ಎನ್ನಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಕರ್ನಾಟಕದಲ್ಲಿ ಇವಿ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಚಿಂತನೆ ನಡೆಸಿತ್ತು. ಇದೇ ಕಾರಣಕ್ಕೆ ಕರ್ನಾಟಕ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್ ಬಳಿ ಸ್ಪಷ್ಟನೆ ಕೋರಿತ್ತು ಎಂದು ನ್ಯೂಸ್ 9 ವರದಿ ಉಲ್ಲೇಖಿಸಿದೆ.
ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಮತ್ತು ದೆಹಲಿ ನಂತರದ ಸ್ಥಾನದಲ್ಲಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…