BREAKING NEWS

1984 ಸಿಖ್‌ ವಿರೋಧಿ ದಂಗೆ: ಕಾಂಗ್ರೆಸ್‌ನ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐನಿಂದ ಚಾರ್ಜ್‌ ಶೀಟ್‌

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪುಲ್ ಬಂಗಾಶ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 1,1984 ರಲ್ಲಿ ರಾಷ್ಟ್ರೀಯ ರಾಜಧಾನಿಯ ಪುಲ್ ಬಂಗಾಶ್ ಪ್ರದೇಶದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಮೂರು ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಕಳೆದ ತಿಂಗಳು ಟೈಟ್ಲರ್ ಅವರ ಧ್ವನಿ ಮಾದರಿಗಳನ್ನು ಸಂಗ್ರಹಿಸಿತ್ತು. ಸಂತ್ರಸ್ತರನ್ನು ಹತ್ಯೆ ಮಾಡಿದ ಗುಂಪನ್ನು ಪ್ರಚೋದಿಸಿದ ಆರೋಪ ಕಾಂಗ್ರೆಸ್ ನಾಯಕನ ಮೇಲಿದೆ.

ನಾನೇನು ಮಾಡಿದ್ದೇನೆ? ನನ್ನ ವಿರುದ್ಧ ಪುರಾವೆಗಳಿದ್ದರೆ, ನಾನು ನೇಣು ಹಾಕಿಕೊಳ್ಳಲು ಸಿದ್ಧನಿದ್ದೇನೆ. ಇದು 1984 ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲ, ಆದರೆ ಅವರು , ಇನ್ನೊಂದು ಪ್ರಕರಣದಲ್ಲಿ ನನ್ನ ಧ್ವನಿಯನ್ನು (ಮಾದರಿ) ಬಯಸಿದ್ದರು ಎಂದು ಅವರು ಸಿಬಿಐನ ವಿಧಿವಿಜ್ಞಾನ ಪ್ರಯೋಗಾಲಯದಿಂದ ಹೊರಬರುವಾಗ ಟೈಟ್ಲರ್ ಹೇಳಿದರು.

2015ರ ಡಿಸೆಂಬರ್‌ನಲ್ಲಿ ನ್ಯಾಯಾಲಯವು ಈ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago