Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೈ ಅಭ್ಯರ್ಥಿ ಬೆಂಬಲಿಗರ ಮನೆಯಲ್ಲಿ 2 ಕೋಟಿ ರೂ. ವಶ

ಮಂಡ್ಯ : ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.
ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾರ್ಡ್ ತಂಡ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದೆ, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ.
ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ