ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.
ಇನ್ನು ಇಂದು ತುಮಕೂರು ಹಾಗೂ ಚಿಕ್ಕಮಗಳೂರುಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಇಂದು ( ಡಿಸೆಂಬರ್ 20 ) ಒಟ್ಟು 20 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 20 ಹೊಸ ಪ್ರಕರಣಗಳು ವರದಿಯಾಗಿದ್ದರೆ, 5 ಜನ ಡಿಸ್‌ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92 ಇದ್ದು, ಕೊನೆಯ 24 ಗಂಟೆಗಳಲ್ಲಿ 808 ಟೆಸ್ಟ್‌ಗಳು ನಡೆದಿವೆ, 407 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 401 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.47% ಇದೆ. ಇನ್ನು ರಾಜ್ಯದಲ್ಲಿ ಈವರೆಗೆ ಇಬ್ಬರು ಕೊವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ.
ಒಟ್ಟು 92 ಸಕ್ರಿಯ ಪ್ರಕರಣಗಳ ಪೈಕಿ 72 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 20 ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 7 ಸೋಂಕಿತರು ಐಸಿಯುನಲ್ಲಿದ್ದು, 17 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…