ಬೆಂಗಳೂರು : 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಶನಿವಾರ ಪ್ರಕಟಗೊಂಡಿದೆ.
ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2023-24 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.
ಮುಂದುವರಿದು, ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ದಿನಾಂಕ: 15.09.2023 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಸಹ ಶಿಕ್ಷಕರು/ವಿಶೇಷ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ. 25,000/- ರಂತೆ, ಒಟ್ಟು ರೂ. 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…