ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 229 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 62 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಮುಟ್ಟಿದೆ. ಕೊನೆಯ 24 ಗಂಟೆಗಳಲ್ಲಿ 3527 ಟೆಸ್ಟ್‌ಗಳು ನಡೆದಿವೆ, 2972 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 555 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 6.49% ಇದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಒಟ್ಟು 1000 ಸಕ್ರಿಯ ಪ್ರಕರಣಗಳ ಪೈಕಿ 943 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 57 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 22 ಸೋಂಕಿತರು ಐಸಿಯುನಲ್ಲಿದ್ದು, 35 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 26, ಮಂಡ್ಯದಲ್ಲಿ 22 ಹಾಗೂ ಚಾಮರಾಜನಗರದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 83, ಮಂಡ್ಯದಲ್ಲಿ 42, ಕೊಡಗಿನಲ್ಲಿ 3 ಹಾಗೂ ಚಾಮರಾಜನಗರದಲ್ಲಿ 33 ಸಕ್ರಿಯ ಪ್ರಕರಣಗಳಿವೆ.
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…