BREAKING NEWS

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 229 ಹೊಸ ಪ್ರಕರಣ; 1000 ಸಕ್ರಿಯ ಕೊವಿಡ್ ಪ್ರಕರಣಗಳು

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 229 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 62 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಮುಟ್ಟಿದೆ. ಕೊನೆಯ 24 ಗಂಟೆಗಳಲ್ಲಿ 3527 ಟೆಸ್ಟ್‌ಗಳು ನಡೆದಿವೆ, 2972 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 555 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 6.49% ಇದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 1000 ಸಕ್ರಿಯ ಪ್ರಕರಣಗಳ ಪೈಕಿ 943 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 57 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 22 ಸೋಂಕಿತರು ಐಸಿಯುನಲ್ಲಿದ್ದು, 35 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 26, ಮಂಡ್ಯದಲ್ಲಿ 22 ಹಾಗೂ ಚಾಮರಾಜನಗರದಲ್ಲಿ 12 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 83, ಮಂಡ್ಯದಲ್ಲಿ 42, ಕೊಡಗಿನಲ್ಲಿ 3 ಹಾಗೂ ಚಾಮರಾಜನಗರದಲ್ಲಿ 33 ಸಕ್ರಿಯ ಪ್ರಕರಣಗಳಿವೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

8 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

9 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

9 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

9 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

10 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

13 hours ago