Mysore
29
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಕರ್ನಾಟಕದಲ್ಲಿಂದು 24 ಹೊಸ ಕೊವಿಡ್‌ ಪ್ರಕರಣ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.

ರಾಜ್ಯದಲ್ಲಿ ಇಂದು ( ಡಿಸೆಂಬರ್‌ 21 ) ಒಟ್ಟು 24 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 24 ಹೊಸ ಪ್ರಕರಣಗಳು ವರದಿಯಾಗಿದ್ದರೆ, 11 ಜನ ಡಿಸ್‌ಚಾರ್ಜ್‌ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 105 ಇದ್ದು, ಕೊನೆಯ 24 ಗಂಟೆಗಳಲ್ಲಿ 2263 ಟೆಸ್ಟ್‌ಗಳು ನಡೆದಿವೆ, 1791 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 472 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 1.06% ಇದೆ. ನಿನ್ನೆ 2.47% ಇದ್ದ ಪಾಸಿಟಿವಿಟಿ ದರ ಕುಸಿತಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 105 ಸಕ್ರಿಯ ಪ್ರಕರಣಗಳ ಪೈಕಿ 85 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 20 ಸೋಂಕಿತರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 9 ಸೋಂಕಿತರು ಐಸಿಯುನಲ್ಲಿದ್ದು, 11 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!