ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.
ರಾಜ್ಯದಲ್ಲಿ ಇಂದು ( ಡಿಸೆಂಬರ್ 21 ) ಒಟ್ಟು 24 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 24 ಹೊಸ ಪ್ರಕರಣಗಳು ವರದಿಯಾಗಿದ್ದರೆ, 11 ಜನ ಡಿಸ್‌ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 105 ಇದ್ದು, ಕೊನೆಯ 24 ಗಂಟೆಗಳಲ್ಲಿ 2263 ಟೆಸ್ಟ್‌ಗಳು ನಡೆದಿವೆ, 1791 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 472 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 1.06% ಇದೆ. ನಿನ್ನೆ 2.47% ಇದ್ದ ಪಾಸಿಟಿವಿಟಿ ದರ ಕುಸಿತಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಒಟ್ಟು 105 ಸಕ್ರಿಯ ಪ್ರಕರಣಗಳ ಪೈಕಿ 85 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 20 ಸೋಂಕಿತರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 9 ಸೋಂಕಿತರು ಐಸಿಯುನಲ್ಲಿದ್ದು, 11 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…
ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ ಹನೂರು: ಹನೂರು…
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…