ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 252 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 441 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1031 ಇದೆ. ಕೊನೆಯ 24 ಗಂಟೆಗಳಲ್ಲಿ 7359 ಟೆಸ್ಟ್‌ಗಳು ನಡೆದಿವೆ, 6514 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 845 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.42% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 56 ವರ್ಷದ ಪುರುಷ ಹಾಗೂ ಬಳ್ಳಾರಿಯಲ್ಲಿ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.
ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 69 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 50 ಸೋಂಕಿತರು ಜನರಲ್ ಬೆಡ್‌ನಲ್ಲಿದ್ದು, 18 ಮಂದಿ ಐಸಿಯುನಲ್ಲಿದ್ದಾರೆ ಹಾಗೂ ಓರ್ವ ಸೋಂಕಿತ ವೆಂಟಿಲೇಟರ್ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 8 ಹಾಗೂ ಕೊಡಗಿನಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 91, ಮಂಡ್ಯದಲ್ಲಿ 20, ಕೊಡಗಿನಲ್ಲಿ 9 ಹಾಗೂ ಚಾಮರಾಜನಗರದಲ್ಲಿ 12 ಸಕ್ರಿಯ ಪ್ರಕರಣಗಳಿವೆ.
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…