BREAKING NEWS

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 252 ಹೊಸ ಪ್ರಕರಣ ಪತ್ತೆ, 441 ಮಂದಿ ಡಿಸ್‌ಚಾರ್ಜ್‌

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 252 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 441 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1031 ಇದೆ. ಕೊನೆಯ 24 ಗಂಟೆಗಳಲ್ಲಿ 7359 ಟೆಸ್ಟ್‌ಗಳು ನಡೆದಿವೆ, 6514 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 845 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.42% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 56 ವರ್ಷದ ಪುರುಷ ಹಾಗೂ ಬಳ್ಳಾರಿಯಲ್ಲಿ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 69 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 50 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, 18 ಮಂದಿ ಐಸಿಯುನಲ್ಲಿದ್ದಾರೆ ಹಾಗೂ ಓರ್ವ ಸೋಂಕಿತ ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 8 ಹಾಗೂ ಕೊಡಗಿನಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 91, ಮಂಡ್ಯದಲ್ಲಿ 20, ಕೊಡಗಿನಲ್ಲಿ 9 ಹಾಗೂ ಚಾಮರಾಜನಗರದಲ್ಲಿ 12 ಸಕ್ರಿಯ ಪ್ರಕರಣಗಳಿವೆ.

andolana

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

14 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago