ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟೀಮ್ ಇಂಡಿಯಾ ಕ್ರಿಕೆಟರ್ ಮೊಹಮ್ಮದ್ ಶಮಿ ಸೇರಿದಂತೆ ಒಟ್ಟು 26 ಅಥ್ಲೀಟ್‌ಗಳು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ರೆಡ್ಡಿ ಸ್ಟಾರ್ ಬ್ಯಾಡ್ಮಿಂಟನ್ ಜೋಡಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಪ್ರಶಸ್ತಿಗೆ ಭಾಜನರಾದವರ ಸಂಪೂರ್ಣ ಪಟ್ಟಿ:
2023ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ (ಬ್ಯಾಡ್ಮಿಂಟನ್)
ಅರ್ಜುನ ಪ್ರಶಸ್ತಿಗಳು: ಓಜಸ್ ಪ್ರವೀಣ್ ದಿಯೋಟಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಪಾರುಲ್ ಚೌಧರಿ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ಮೊಹಮ್ಮದ್ ಶಮಿ (ಕ್ರಿಕೆಟ್), ಅನುಷ್ ಅಗರವಾಲ್ ( ಕುದುರೆ ಸವಾರಿ), ದಿವ್ಯಾಕೃತಿ ಸಿಂಗ್ (ಕುದುರೆ ಸವಾರಿ), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಠಾಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪವನ್ ಕುಮಾರ್ (ಕಬಡ್ಡಿ), ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ-ಖೋ), ಪಿಂಕಿ ( ಲಾನ್ ಬೌಲ್ಸ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಇಶಾ ಸಿಂಗ್ (ಶೂಟಿಂಗ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್), ಸುನಿಲ್ ಕುಮಾರ್ (ಕುಸ್ತಿ), ಅಂತಿಮ್ (ಕುಸ್ತಿ), ನವೋರೆಮ್ ರೋಶಿಬಿನಾ ದೇವಿ (ವುಶು) , ಶೀತಲ್ ದೇವಿ (ಪ್ಯಾರಾ ಆರ್ಚರಿ), ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್).
ದ್ರೋಣಾಚಾರ್ಯ ಪ್ರಶಸ್ತಿ: ಲಲಿತ್ ಕುಮಾರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಖ್ಕರ್ (ಮಲ್ಲಗಂಬ)
ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ ಶ್ರೇಷ್ಠ ಸಾಧನೆ): ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಭಾಸ್ಕರನ್ ಇ (ಕಬಡ್ಡಿ), ಜಯಂತ ಕುಮಾರ್ ಪುಶಿಲಾಲ್ (ಟೇಬಲ್ ಟೆನಿಸ್).
ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ: ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್), ವಿನೀತ್ ಕುಮಾರ್ ಶರ್ಮಾ (ಹಾಕಿ), ಕವಿತಾ ಸೆಲ್ವರಾಜ್ (ಕಬಡ್ಡಿ).
ಹಾಸನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ತವರು ಜಿಲ್ಲೆಗೆ ಆಗಮಿಸಿದ್ದು, ಮನೆ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.…
ಮಂಡ್ಯ: ಮಧು ಜಿ.ಮಾದೇಗೌಡ ಅವರ ಅಭಿಮಾನಿಗಳ ಬಳಗದ ವತಿಯಿಂದ ವಿಧಾನ ಪರಿಷತ್ ಸದಸ್ಯ ಹಾಗೂ ಭಾರತಿ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ…
ಮೈಸೂರು: ಮಕ್ಕಳು ಕೇವಲ ಪಠ್ಯ ಕ್ರಮಕ್ಕೆ ಮಾತ್ರ ಸೀಮಿತವಾಗದೆ, ತಮ್ಮಲ್ಲಿರುವಂತಹ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…
ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ಇದೇ ಡಿಸೆಂಬರ್ 29ಕ್ಕೆ ಕೆಎಎಸ್ ಮರು ಪರೀಕ್ಷೆ ನಡೆಯುತ್ತಿದ್ದು, ಮತ್ತೆ ಈ ಪರೀಕ್ಷೆಯಲ್ಲಿ ಮತ್ತೆ ಬೇಜವಾಬ್ದಾರಿತನ…
ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಡಿ.23) ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ…
ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ…