BREAKING NEWS

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್, ಸರ್ಕಾರಕ್ಕೆ ಬಿಗ್ ರಿಲೀಫ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಈಗ ಹೊಸ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದೆ. ಅಲ್ಲದೇ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಸೂಚನೆ ನೀಡಿ ಮಧ್ಯಂತರ ಆದೇಶ ತೆರವುಗೊಳಿಸಿದೆ. ಇದರೊಂದಿಗೆ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್​ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹಂಚಿಕೆ ಸಂಬಂಧಿಸಿದಂತೆ ಪ್ರವರ್ಗ 2ಎ ಸೇರ್ಪಡೆ ಮಾಡುವ ಅಥವಾ 2ಸಿ, 2ಡಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಕೈಗೊಂಡಿದ್ದ ನಿರ್ಣಯದ ಮುಂದಿನ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ಬಿದ್ದಿತ್ತು.

ಆದ್ರೆ, ಇದೀಗ 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದ್ದರಿಂದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.

ಪಂಚಮಸಾಲಿ ಮೀಸಲು ಬಗ್ಗೆ ಶುಕ್ರವಾರ ನಿರ್ಧಾರ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಕೊನೆಯದು ಎನ್ನಲಾಗಿರುವ ಮಹತ್ವದ ಸಭೆ ಶುಕ್ರವಾರ ನಡೆಯಲಿದ್ದು, ಸಾಕಷ್ಟು ಚರ್ಚೆಗೆ ಈಡು ಮಾಡಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಇದಲ್ಲದೆ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ವಿವಿಧ ಸಮುದಾಯಗಳನ್ನು ಓಲೈಸುವ ನಿಟ್ಟಿನಲ್ಲಿ ಹಲವು ಪ್ರಮುಖ ಕೊಡುಗೆಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮುಂದಿನ ವಾರಾಂತ್ಯದ ವೇಳೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡುವ ಸಂಭವವಿದೆ. ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬರಲಿರುವುದರಿಂದ ಬಹುಶಃ ಶುಕ್ರವಾರದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವುದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

lokesh

Recent Posts

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

17 mins ago

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

46 mins ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

1 hour ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

4 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

4 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

4 hours ago