ಬೆಂಗಳೂರು : ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಫೈನಲ್ ಮಾಡಲಾಗಿತ್ತು.ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಒಬ್ಬರೇ ಅಭ್ಯರ್ಥಿ ಇರುವಂತಹ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನ ಘೋಷಣೆ ಮಾಡಿತ್ತು.ಆದರೆ ಎರಡಕ್ಕಿಂತ ಹೆಚ್ಚು ಆಕಾಂಕ್ಷಿಗಳು ಇರುವಂತಹ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡುವುದೇ ಕಾಂಗ್ರೆಸ್ ನಾಯಕರಿಗೆ ತೀವ್ರ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಈ ಗೊಂದಲಕ್ಕೆ ಕಾಂಗ್ರೆಸ್ ನಾಯಕರು ತೆರೆ ಎಳೆದಿದ್ದು ಅಬ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಇಲ್ಲಿದೆ ಅಭ್ಯರ್ಥಿಗಳ ಪಟ್ಟಿ